ಕೂಳೂರು ಬಳಿ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲು; ಪಾಲಿಕೆ ನಿರ್ಲಕ್ಷ್ಯ!

ಮಂಗಳೂರಿನ ಕೂಳೂರು ಸೇತುವೆ ಬಳಿ ಕುಡಿಯುವ ಮುಖ್ಯ ನೀರಿನ ಕೊಳವೆ ಒಡೆದು ಹೋಗಿದ್ದು, ನಿನ್ನೆ ರಾತ್ರಿಯಿಂದಲೇ ಸಾವಿರಾರು ಲೀಟರ್ ಶುದ್ಧ ನೀರು ವ್ಯರ್ಥವಾಗಿ ಹರಿಯುತ್ತಿದೆ. ಕುಡಿಯುವ ನೀರಿಗಾಗಿ ಹಾಹಾಕಾರ ಇರುವ ಇಂತಹ ಸಂದರ್ಭದಲ್ಲಿ, ಇಷ್ಟೊಂದು ಪ್ರಮಾಣದ ನೀರು ಪೋಲಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಈ ಘಟನೆ ನಡೆದು ಇಷ್ಟು ಸಮಯ ಕಳೆದರೂ ಮಂಗಳೂರು ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತವು ಯಾವುದೇ ಕ್ರಮ ಕೈಗೊಳ್ಳದಿರುವುದು ಪಾಲಿಕೆಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ.ಊರಿನ ನಾಗರಿಕರ ಪರವಾಗಿ, ತಕ್ಷಣ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇವೆ.
