12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ; ಎಲ್ಲರೂ ಸಾವನ್ನಪ್ಪಿರುವ ಶಂಕೆ

ನೈರೋಬಿ: ಕೀನ್ಯಾದ (Kenya) ಕ್ವಾಲೆಯಲ್ಲಿ (Kwale) 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಮಂಗಳವಾರ (ಅ.28) ಬೆಳಿಗ್ಗೆ 5Y-CCA ಸಂಖ್ಯೆಯ ವಿಮಾನವು ಡಯಾನಿಯಿಂದ ಕಿಚ್ವಾ ಟೆಂಬೊಗೆ ತೆರಳುತ್ತಿತ್ತು. ವಿಮಾನದಲ್ಲಿ 12 ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಈ ವೇಳೆ ಬೆಳಿಗ್ಗೆ 8:30ರ ಸುಮಾರಿಗೆ 0530Z ಎಂಬಲ್ಲಿ ಪತನಗೊಂಡಿದೆ ಎಂದು ಕೀನ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ (Kenya Civil Aviation Authority) ದೃಢಪಡಿಸಿದೆ.
ಸದ್ಯ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚುವಲ್ಲಿ ನಿರತರಾಗಿದ್ದಾರೆ. ಹವಾಮಾನ ಸ್ಥಿತಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಕಿಚ್ವಾ ಟೆಂಬೊಗೆ ಬೆಳಿಗ್ಗೆ 9 ಗಂಟೆಗೆ ತಲುಪಬೇಕಿದ್ದ ವಿಮಾನದಲ್ಲಿ ಮಸಾಯಿ ಮಾರಾಗೆ ತೆರಳುತ್ತಿದ್ದ ಪ್ರವಾಸಿಗರಿದ್ದರು ಎಂದು ಮೂಲಗಳು ತಿಳಿಸಿವೆ.