ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ ಮಾಡಿದ ಪೊಲೀಸ್ ಕಾನ್‌ಸ್ಟೆಬಲ್

ಬೆಂಗಳೂರು : ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯಿಸಿಕೊಂಡು ಬಳಿಕ ಓಯೋ ರೂಮ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ ಆರೋಪದಡಿ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿ ಪೊಲೀಸ್ ಠಾಣೆ ಕಾನ್‌ಸ್ಟೆಬಲ್ ಅರುಣ್ ತೋನೆಪ ಮತ್ತು ಸಂತ್ರಸ್ತೆಯ ಪ್ರಿಯಕರ ವಿಕ್ಕಿ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಬಿಎನ್‌ಎಸ್ ಕಾಯ್ದೆಯ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಕೆಲ ದಿನಗಳ ಹಿಂದೆ ಸಂತ್ರಸ್ತೆಯ ಪ್ರಿಯಕರ ವಿಕ್ಕಿಯನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಇದೀಗ ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹದಿನೇಳು ವರ್ಷದ ಸಂತ್ರಸ್ತೆ ತನ್ನ ಕುಟುಂಬದ ಜತೆಗೆ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ಎದುರು ಮನೆಯ ವಿಕ್ಕಿ ಎಂಬಾತ ಅಪ್ರಾಪ್ತೆಯನ್ನ…
ಕಳೆದ ಡಿ.22 ಮತ್ತು 30ರಂದು ಬಿಟಿಎಂ ಲೇಔಟ್‌ನ ಓಯೋ ರೂಮ್‌ಗೆ ಸಂತ್ರಸ್ತೆಯನ್ನು ಕರೆದೊಯ್ದು ಬಿಯರ್ ಕುಡಿಸಿದ್ದಾನೆ. ಸಂತ್ರಸ್ತೆ ಮತ್ತಿನಲ್ಲಿ ಇರುವಾಗ ಬಲವಂತವಾಗಿ ಆಕೆ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋಗಳು ನನ್ನ ಬಳಿ ಇದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.