ಸಂತ್ರಸ್ತೆಯ ಪರ ನಿಂತ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಗೆ ಪೊಲೀಸ್ ನೋಟಿಸ್!

ಪುತ್ತೂರಿನ ಬಹುಚರ್ಚಿತ ‘ಲವ್ ಸೆಕ್ಸ್ ಧೋಖಾ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಪರವಾಗಿ ಧ್ವನಿ ಎತ್ತಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರಿಗೆ ಪುತ್ತೂರು ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.


ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಾವ್ ಅವರ ತಂದೆ ಪಿ.ಜಿ. ಜಗನ್ನಿವಾಸ ರಾವ್ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಈ ಅರ್ಜಿಯನ್ನು ಹೆಚ್ಚಿನ ತನಿಖೆಗಾಗಿ ಪುತ್ತೂರು ನಗರ ಠಾಣೆಗೆ ವರ್ಗಾಯಿಸಲಾಗಿದ್ದು, ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಮಾಹಿತಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.