ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ; 50 ಕೆಜಿ ಮಾಂಸ, ಪರಿಕರಗಳು ವಶ!

ಮೂಡುಬಿದಿರೆಯ ಗಂಟಾಲ್ ಕಟ್ಟೆಯ ಜಲೀಲ್ ಎಂಬವರ ಮನೆ ಹಿಂಭಾಗದ ಕಾಡಿನಲ್ಲಿ ಜಾನುವಾರು ಕಡಿದು ಮಾಂಸ ಮಾಡುತ್ತಿರುವ ಆರೋಪದ ಮೇಲೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ನಾಲ್ಕು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಆತನ ಪುತ್ರ ಸೊಹೇಲ್, ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪರಾರಿಯಾದ ಆರೋಪಿಗಳು.
ಮೂಡಬಿದ್ರೆ ಠಾಣಾ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ದಾಳಿ ನಡೆಸಿ 50ಕೆಜಿ ಮಾಂಸ ಸಹಿತ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. 3 ದನಗಳನ್ನು ವಶಕ್ಕೆ ಪಡೆದು ಗೋಶಾಲೆಗೆ ಒಪ್ಪಿಸಲಾಗಿದೆ.