Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ? ‘ಕಾವೇರಿ’ಯಲ್ಲಿ ಹೈವೋಲ್ಟೇಜ್ ಸಭೆ!

Spread the love

ಬೆಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ಮಹತ್ವದ ಬ್ರೇಕ್‌ಫಾಸ್ಟ್ಮೀಟಿಂಗ್ ಆರಂಭವಾಗಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆಯಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಉಪಾಹಾರ ಸಭೆಯಲ್ಲಿ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ರಾಮಲಿಂಗ ರೆಡ್ಡಿ, ಡಾ.ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮಂದಿ ಬ್ರೇಕ್ ಫಾಸ್ಟ್ ಸಭೆಗೆ ಆಗಮಿಸಿದ್ದಾರೆ.ಡಿಸಿಎಂ ಆಗಮನದ ವೇಳೆ ಸಿದ್ದರಾಮಯ್ಯ ಬೆಂಬಲಿಗರ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದು, 5 ವರ್ಷ ಸಿದ್ದು ಸಿಎಂ ಎಂದು ಘೋಷಣೆ ಕೂಗಿ ಡಿ.ಕೆ.ಶಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಭಾರೀ ಬಿಗಿ ಪೊಲೀಸ್ ಭದ್ರತಾ ವ್ಯವಸ್ಥೆಗಳ ನಡುವೆ ಬ್ರೇಕ್ ಫಾಸ್ಟ್ ಮಿಟಿಂಗ್ ಆರಂಭವಾಗಿದ್ದು, ನಾಲೈದು ತಿಂಗಳ ನಾಯಕತ್ವದ ಗೊಂದಲಕ್ಕೆ ತೆರೆ ಬಿಳಲಿದೆ ಎಂಬ ಕುತೂಹಲ ಸೃಷ್ಟಿಸಿದೆ.
ಈ ಮಧ್ಯೆ ರಾಜ್ಯಪಾಲ ಥಾವರ್ ಚೆಂದ್ ಗೆಹೋಟ್ ಅವರು ಬೇರೆ ಕಾರ್ಯ ನಿಮಿತ್ತ ಮುಂಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದ್ದು, ರಾಜ್ಯದಲ್ಲಿನ ಬೆಳವಣಿಗೆಗಳು ನಾಟಕೀಯ ಘಟನೆಗಳಿಗೆ ಸಾಕ್ಷಿಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *