Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೋಮು ಸೌಹಾರ್ದತೆಗೆ ಧಕ್ಕೆ ಅಂದಾಜು: ಶ್ರೀಕಾಂತ್ ಶೆಟ್ಟಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

Spread the love

ಉಡುಪಿ: ಉಡುಪಿಯ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಮೂರು ತಿಂಗಳ ಕಾಲ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಭಾನುವಾರ ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಉದ್ಘಾಟನಾ ಸಮಾರಂಭದಲ್ಲಿ ಶ್ರೀಕಾಂತ್ ಶೆಟ್ಟಿ ಭಾಗವಹಿಸುವವರಿದ್ದರು.

ಆದರೆ ಇದೀಗ ಜಿಲ್ಲಾಡಳಿತವು ಅವರಿಗೆ ಜಿಲ್ಲೆಗೆ ಮೂರು ತಿಂಗಳುಗಳ ಕಾಲ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.ಕಾರ್ಯಕ್ರಮದಲ್ಲಿ ಅವರು ಶಿವಾಜಿ ಮಹಾರಾಜರ ಪರಂಪರೆಯ ಕುರಿತು ಉಪನ್ಯಾಸ ನೀಡುವ ಭಾಷಣದಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಂಭವವಿದೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಈ ಹಿನ್ನಲೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಜಂಟಿಯಾಗಿ ಈ ನಿರ್ಬಂಧವನ್ನು ಜಾರಿಗೊಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *