ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಖಾಸಗಿ ಬಸ್ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಧರ್ಮಸ್ಥಳಕ್ಕೆ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಲು ಬಂದಿದ್ದ ಈ ಬಸ್, ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಾಟಿಯ ತಿರುವಿನಲ್ಲಿ ಚಾಲಕನ ಹತೋಟಿ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಸ್ ನಲ್ಲಿದ್ದ 20ಕ್ಕೂ ಅಧಿಕ ಮಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.