ಖಾಸಗಿ ಸಂಘಟನೆಗಳು ಸಾರ್ವಜನಿಕ ಸ್ಥಳ ಬಳಸಬೇಕಾದರೆ ಇನ್ಮುಂದೆ ಕಡ್ಡಾಯ ಪೂರ್ವಾನುಮತಿ: ರಾಜ್ಯ ಸಚಿವ ಸಂಪುಟದ ಹೊಸ ನಿಯಮ

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಆಕ್ಟೋಬರ್ 4ರಂದು ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಪ್ರಿಯಾಂಕ್ ಖರ್ಗೆ ಮನವಿಗೆ ಸರ್ಕಾರ ಸ್ಪಂದಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಮೂಲಕ ಪರೋಕ್ಷವಾಗಿ ಆರ್ ಎಸ್ಎಸ್ ಕಾರ್ಯ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ.
ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ: ಪರೋಕ್ಷವಾಗಿ RSS ಚಟುವಟಿಕೆಗಳಿಗೆ ಬ್ರೇಕ್
ವಿಧಾನಸೌಧ
ಬೆಂಗಳೂರು, (ಅಕ್ಟೋಬರ್ 16): ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ದವಾಗಿ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಇಂದು (ಅಕ್ಟೋಬರ್ 16) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ (Karnataka Cabinet) ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖ ಮಾಡದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.
