Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಕಲಹ, ಅಣ್ಣನಿಂದ ತಮ್ಮನ ಕೊಲೆ

Spread the love

ಮಡಿಕೇರಿ: ಆಸ್ತಿ ವಿಚಾರವಾಗಿ ಸಹೋದರರ ನಡುವೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನಿಗೆ ಗುಂಡಿನ ಹಾರಿಸಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಭ್ಯತ್ ಮಂಗಲ ಗ್ರಾಮದಲ್ಲಿ ನಡೆದಿದೆ.

ಕೊಳಂಬೆ ವಿನು ಬೆಳ್ಯಪ್ಪ ಮೃತ ದುರ್ದೈವಿ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಸಹೋದರ ಮಣಿ ಹಿಂದಿನಿಂದ ಬಂದು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.

ಆರೋಪಿ ಮಣಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಅಣ್ಣ-ತಮ್ಮನ ನಡುವೆ ಹಲವು ದಿನಗಳಿಂದ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಘಟನೆ ಸಂಬಂಧಿಸಿದಂತೆ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಡಗು ಎಸ್‌ಪಿ ರಾಮರಾಜನ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *