Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪುಟಿನ್ ಭೇಟಿ ನಂತರ ಟ್ರಂಪ್ ಜೊತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ: ಜಾಗತಿಕ ಪಾಲುದಾರಿಕೆ ಕುರಿತು ಚರ್ಚೆ

Spread the love

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರೊಂದಿಗೆ ಸುದೀರ್ಘ ದೂರವಾಣಿ ಸಂಭಾಷಣೆ ನಡೆಸಿದರು. ಈ ವೇಳೆ ಉಭಯ ನಾಯಕರು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯಲ್ಲಿ ಭಾರತ-ಅಮೆರಿಕದ ಪ್ರಗತಿ ಕುರಿತು ಚರ್ಚಿಸಿದರು. ಜೊತೆಗೆ ಎರಡೂ ರಾಷ್ಟ್ರಗಳ ದ್ವಿಪಕ್ಷೀಯ ಸಹಕಾರಗಳ ಬಗ್ಗೆ ತೃಪ್ತಿ ಕಂಡುಕೊಂಡರು.

ಪುಟಿನ್‌ (Vladimir Putin) ಭಾರತದ ಭೇಟಿ ಬಳಿಕ ಪ್ರಧಾನಿ ಮೋದಿ ಅವರು ಟ್ರಂಪ್‌ ಅವರೊಂದಿಗೆ ನಡೆಸಿದ ಮೊದಲ ದೂರವಾಣಿ ಸಂಭಾಷಣೆ ಇದಾಗಿದೆ. ಈ ಕುರಿತು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಾನು ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಬಹಳ ಆತ್ಮೀಯ ಮತ್ತು ಅದ್ಭುತ ಸಂಭಾಷಣೆ ನಡೆಸಿದೆ. ನಾವು ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿಯನ್ನೂ ಪರಿಶೀಲಿಸಿದ್ದೇವೆ. ಇದರೊಂದಿಗೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದೇವೆ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಭಾರತ ಮತ್ತು ಅಮೆರಿಕ (India And USA) ಒಟ್ಟಾಗಿ ಕೆಲಸ ಮಾಡುವುದನ್ನ ಮುಂದುವರಿಸುತ್ತವೆ ಎಂದು ತಿಳಿಸಿದ್ದಾರೆ.

ಇನ್ನೂ ಸಂಭಾಷಣೆ ಸಮಯದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ವ್ಯಾಪಾರ ಹೆಚ್ಚಿಸುವ ಬಗ್ಗೆ ಒತ್ತಿ ಹೇಳಿದ್ದಾರೆ. ಅಲ್ಲದೇ ಮಿಲಿಟರಿ ಪಾಲುದಾರಿಕೆಯ ಅವಕಾಶಗಳನ್ನು ಹೆಚ್ಚಿಸುವುದು, ವಾಣಿಜ್ಯ ಮತ್ತು ತಂತ್ರಜ್ಞಾನ, ಇಂಧನ, ರಕ್ಷಣೆ ಮತ್ತು ಭದ್ರತೆ ಸೇರಿದಂತೆ ಆದ್ಯತೆಯ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಹೆಚ್ಚಿಸುವ ಬಗ್ಗೆ ಚರ್ಚಿಸಿದರು. ಬಳಿಕ ಎಲ್ಲಾ ಕ್ಷೇತ್ರಗಳಲ್ಲಿ ನಿರಂತರ ಸಹಕಾರ ಬಲಗೊಳ್ಳುತ್ತಿದ್ದೆ ಎಂದು ಉಭಯ ನಾಯಕರು ತೃಪ್ತಿಪಟ್ಟುಕೊಂಡರು ಎಂದು ವರದಿಗಳು ತಿಳಿಸಿವೆ.


Spread the love
Share:

administrator

Leave a Reply

Your email address will not be published. Required fields are marked *