Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪುತ್ತೂರಿನ ಪತ್ರಕರ್ತ ಅನೀಶ್ ಕುಮಾರ್‌ಗೆ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ!

Spread the love

ಪುತ್ತೂರು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಕಾಸರಗೋಡು ಇದರ ನೇತೃತ್ವದಲ್ಲಿ ಈ ವರ್ಷ ನಡೆಯಲಿರುವ ಕೇರಳ ರಾಜ್ಯ ‌8 ನೇ ಕನ್ನಡ ಸಮ್ಮೇಳನ 2026, ಕೇರಳ ಕರ್ನಾಟಕ ಉತ್ಸವ ಇದರ ಪ್ರತಿಷ್ಟಿತ “ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಗೆ ಪುತ್ತೂರಿನ ವಿ4 ಚಾನೆಲ್ ವರದಿಗಾರ ಅನೀಶ್ ಕುಮಾರ್ ಕೆ. ಆಯ್ಕೆಯಾಗಿದ್ದಾರೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಕನ್ನಡ ಗ್ರಾಮ, ಕಾಸರಗೋಡು ಇದರ ಅಧ್ಯಕ್ಷ ಶಿವರಾಮ ಕಾಸರಗೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ರ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ ನಡೆಯುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ – 2026, ಕೇರಳ-ಕರ್ನಾಟಕ ಉತ್ಸವ, ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ, ಕೇರಳ – ಕರ್ನಾಟಕ ಭವನದ ಭೂಮಿಪೂಜೆ, ಶಿಲಾನ್ಯಾಸ ಸಮಾರಂಭವು 2026 ನವಂಬರ್ 28 ಶನಿವಾರದಂದು ಬೆಳಿಗ್ಗೆ ಗಂಟೆ 10ಕ್ಕೆ ನಡೆಯಲಿದೆ. ನವೆಂಬರ್ 29 ರ ಆದಿತ್ಯವಾರದಂದು ಮಧ್ಯಾಹ್ನ 3ಕ್ಕೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರತಿಷ್ಠಿತ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪುತ್ತೂರಿನಲ್ಲಿ ಕಳೆದ 16 ವರ್ಷಗಳಿಂದ ಪತ್ರಕರ್ತರ ಕರ್ತವ್ಯ ನಿರ್ವಹಿಸುತ್ತಿರುವ ಅನೀಶ್ ಕುಮಾರ್ ಅವರು ದೃಶ್ಯ ಮಾಧ್ಯಮ ವರದಿಗಾರಿಕೆಯಲ್ಲಿ ವಿಶೇಷ ಅನುಭವ ಹೊಂದಿದ್ದು, ಸಾವಿರಾರು ಜನಪರ ವರದಿಗಳ ಮೂಲಕ ಪುತ್ತೂರಿನ ಅಭಿವೃದ್ಧಿ, ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದ್ದಾರೆ. ರಾಷ್ಟ್ರ, ರಾಜ್ಯ ಮಟ್ಟದ ಹಲವು ಗಣ್ಯರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರು, ಹೀಗೆ ಹಲವು ಗಣ್ಯರ ಪುತ್ತೂರು ಭೇಟಿಯ ಸಂದರ್ಭದಲ್ಲಿ ಸಾಕ್ಷಿಯಾಗಿ ಅವರ ಹೇಳಿಕೆ ಪಡೆದು ಹಲವು ಮಾಧ್ಯಮಗಳಲ್ಲಿ ವರದಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅನೀಶ್ ಅವರ ಮಾಧ್ಯಮ ರಂಗದ ಸೇವೆಯನ್ನು ಗುರುತಿಸಿ ಹಲವು ಸಂಘ- ಸಂಸ್ಥೆಗಳು ಸಮ್ಮಾನವನ್ನು ನೀಡಿದ್ದು, ಇದೀಗ ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *