Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪುತ್ತೂರು: ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ಹಕೀಂ ಕೂರ್ನಡ್ಕ ಸೇರಿದಂತೆ ಮೂವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು!

Spread the love

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಪ್ರೇಸ್ ಮೀಟ್ ನಡೆಸುತ್ತಿರುವ ವೇಳೆ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳ್ವಾರಿನ ಹಕೀಂ 2) ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ ಹಾಗೂ 3) ಕೂರ್ನಡ್ಕದ ರವೂಫ್ ಮತ್ತು ಇತರರ ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 1, 2026 ರಂದು ಮಧ್ಯಾಹ್ನ ಪುತ್ತೂರು ಕಸಬ ಗ್ರಾಮದ ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಜನರ ಗುಂಪೊಂದು ಪರಸ್ಪರ ಗಲಾಟೆ ನಡೆಸುತ್ತಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು.

ಮಾಹಿತಿ ಆಧಾರಿಸಿ ಇನ್ಸ್‌ಪೆಕ್ಟರ್ ಅವರು ತಮ್ಮ ಸಿಬ್ಬಂದಿಯೊಂದಿಗೆ ತಕ್ಷಣ ಸ್ಥಳಕ್ಕೆ ತೆರಳಿದಾಗ, ಕೆಲವು ವ್ಯಕ್ತಿಗಳು ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ಮಾಡುತ್ತಿರುವುದು ಹಾಗೂ ಸಾರ್ವಜನಿಕ ನೆಮ್ಮದಿಗೆ ಧಕ್ಕೆ ತರುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗಲಾಟೆ ನಿಲ್ಲಿಸುವಂತೆ ತಿಳುವಳಿಕೆ ನೀಡಿದರೂ, ಅವರು ಅದನ್ನು ನಿರ್ಲಕ್ಷಿಸಿ ಕಲಹವನ್ನು ಮುಂದುವರಿಸಿದ್ದರು.

ಪೊಲೀಸರ ಸೂಚನೆಗೂ ಕ್ಯಾರೇ ಎನ್ನದೆ ಗಲಾಟೆ ಮುಂದುವರಿಸಿದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಜಾನ್ಸನ್ ಡಿಸೋಜ ಅವರ ದೂರಿನಂತೆ ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಹಾಗೂ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 104/2026, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 194(2) ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *