Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಳಿಗಾಲದ ಅಧಿವೇಶನ ವಿಸ್ತರಣೆಗೆ ಆರ್. ಅಶೋಕ್ ಒತ್ತಾಯ

Spread the love

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ಹತ್ತು ದಿನಗಳ ಕಾಲ ನಿಗದಿಪಡಿಸಿದ್ದ ವಿಧಾನ ಮಂಡಲ ಚಳಿಗಾಲದ ಅಧಿವೇಶನದ ಅವಧಿಯನ್ನು ಇನ್ನೂ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. ಸೋಮವಾರ ಈ ಸಂಬಂಧ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿರುವ ಅವರು, ಈ ಅವಧಿಯಲ್ಲಿ ಎರಡು ದಿನಗಳ ಸಮಯವು ಮೊಟಕುಗೊಂಡಿದೆ. ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾದ ಸಾಕಷ್ಟು ವಿಷಯಗಳು ಬಾಕಿಯಿರುವ ಹಿನ್ನೆಲೆಯಲ್ಲಿ, ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಸ್ತುತ ಅಧಿವೇಶನವನ್ನು ಇನ್ನೂ ಐದು ದಿನಗಳ ಕಾಲ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *