ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಆರ್.ಎನ್. ರವಿ ಪ್ರಮಾಣವಚನ ಸ್ವೀಕಾರ

ಕೋಲ್ಕತ್ತಾ: ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್. ರವಿ ಅವರು ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಕೋಲ್ಕತ್ತಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಿಧಾನಸಭಾ ಸ್ಪೀಕರ್ ಬಿಮನ್ ಬ್ಯಾನರ್ಜಿ, ಹಿರಿಯ ಸಚಿವ ಹಾಗೂ ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಹಾಗೂ ಎಡರಂಗದ ಅಧ್ಯಕ್ಷ ಬಿಮನ್ ಬೋಸ್ ಅವರ ಸಮ್ಮುಖದಲ್ಲಿ ಈ ಸಮಾರಂಭ ನಡೆಯಿತು.

ಆದರೆ, ವಿರೋಧ ಪಕ್ಷದ ಬಿಜೆಪಿ ಪಾಳಯದ ಯಾವುದೇ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.
ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಾರ್ಚ್ 5ರಂದು ಸಿ.ವಿ. ಆನಂದ ಬೋಸ್ ರಾಜೀನಾಮೆ ನೀಡಿದ ಬಳಿಕ ಆರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು.
ಆರ್.ಎನ್. ರವಿ ಅವರು ಈ ಹಿಂದೆ ನಾಗಾಲ್ಯಾಂಡ್, ಮೇಘಾಲಯ ಹಾಗೂ ತಮಿಳುನಾಡು ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.