Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

CJP ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ: ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’ ಎಂದು ಎಚ್ಚರಿಕೆ!

Spread the love

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ತ್ರಿವರ್ಣ ಧ್ವಜ ಹಾರಿಸಿದ್ದಕ್ಕಾಗಿ ಕಾಕ್ರೋಚ್‌ ಜನತಾ ಪಕ್ಷದ(CJP) ನಾಯಕರನ್ನು ಜೈಲಿಗೆ ಕಳುಹಿಸಿರುವುದು ಹೇಡಿತನದ ಕೃತ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ.ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರ ಬಂಧನದ ಬಗ್ಗೆ ಬುಧವಾರ ಪ್ರತಿಕ್ರಿಯಿಸಿರುವ ಅವರು, ಜಂತರ್ ಮಂತರ್ ಅನ್ನು ಮರಳಿ ಪಡೆಯುವುದಾಗಿ ಹೇಳಿದ್ದಾರೆ.

ಸಿಜೆಪಿ ಪ್ರತಿಭಟನೆ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆಯ ವೇಳೆ ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ. ಅದಕ್ಕಾಗಿ ಸಿಜೆಪಿ ಯುವಕರನ್ನು ಜೈಲಿಗೆ ಹಾಕುವುದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು, ಯುವಕರು, ಪತ್ರಕರ್ತರು ಮತ್ತು ಇಂಡಿಯಾ ಬ್ಲಾಕ್‌—ಬೇರೆ ಬೇರೆ ಬ್ಯಾನರ್‌ಗಳಿದ್ದರೂ ಎಲ್ಲರೂ ಒಂದೇ ಕಾರಣಕ್ಕಾಗಿ ನಿಂತಿದ್ದಾರೆ. ನಾಗರಿಕರು ತಮ್ಮ ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಾರೆ. ಜಂತರ್ ಮಂತರ್ ಭಾರತೀಯರಿಗೆಲ್ಲರಿಗೂ ಸೇರಿದ್ದು, ಅದನ್ನು ಮರಳಿ ಪಡೆಯುತ್ತೇವೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಜಂತರ್ ಮಂತರ್ ಆವರಣಕ್ಕೆ ಅತಿಕ್ರಮಣ ಮಾಡಿದ ಆರೋಪದ ಮೇಲೆ ಕಾಕ್ರೋಚ್‌ ಜನತಾ ಪಾರ್ಟಿಯ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಇಬ್ಬರನ್ನೂ ಮಂದಿರ ಮಾರ್ಗದಲ್ಲಿರುವ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ನ್ಯಾಯಾಲಯವು ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಅಜಿಂಕ್ಯ ಶಿಂಧೆ ಅವರಿಗೆ 5,000 ಬಾಂಡ್ ಸಲ್ಲಿಸಿದ ಬಳಿಕ ಜಾಮೀನು ನೀಡಲಾಗಿದೆ. ಒಂದು ವರ್ಷದವರೆಗೆ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂಬ ಷರತ್ತು ವಿಧಿಸಲಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *