ರಾಯಚೂರು: ಭೀಕರ ಹಿಟ್ ಅಂಡ್ ರನ್; ಲಾರಿ ಡಿಕ್ಕಿಯಾಗಿ ಮೂವರು ಯುವಕರ ದಾರುಣ ಸಾ*ವು

ರಾಯಚೂರು: ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೊಹಮ್ಮದ್ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಟ್ರಕ್ ಸಮೇತ ಚಾಲಕ ಪರಾರಿ
ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರಿಗೆ ಡಿಕ್ಕಿ ಹೊಡೆದ ಲಾರಿ
ಸಿಗ್ನಲ್ ಕ್ರಾಸ್ ಮಾಡ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ಬಳಿ ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಕಾರಿನ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಗುದ್ದಿರುವ ರಭಸಕ್ಕೆ ಕಾರಿನ ಡೋರ್ ಜಖಂ ಆಗಿದ್ದು, ಸ್ಥಳಕ್ಕೆ ಹಲಸೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಬಂಧ ವಾಹನಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಲಾರಿ ಚಾಲಕ ಡ್ರಿಂಕ್ ಆ್ಯಂಡ್ ಡ್ರೈವ್ ಮಾಡಿರೋದು ಗೊತ್ತಾಗಿದೆ.