Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮುಂಬೈ ಸಬ್‌ಅರ್ಬನ್ ರೈಲುಗಳಲ್ಲಿ ಸ್ವಯಂಚಾಲಿತ ಡೋರ್ ಕ್ಲೋಸ್ ವ್ಯವಸ್ಥೆ ಅಳವಡಿಕೆಗೆ ರೈಲ್ವೆ ಮಂಡಳಿ ನಿರ್ಧಾರ

Spread the love

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟ ಘಟನೆ ನಡೆದ ಬೆನ್ನಲ್ಲೇ ರೈಲ್ವೆ ಮಂಡಳಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಮುಂಬೈನ ಸಬ್ ಅರ್ಬನ್ ಗಾಗಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ರೈಲುಗಳಲ್ಲಿ ಸ್ವಯಂಚಾಲಿತ ಡೋರ್ ಕ್ಲೋಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ರೈಲ್ವೆ ಮಂಡಳಿ ತಿಳಿಸಿದೆ.

ಮುಂಬೈ ಮಹಾನಗರಿಯಲ್ಲಿ ರೈಲುಗಳಲ್ಲಿ ಜನದಟ್ಟಣೆ ನಿಯಂತ್ರಿಸುವುದು ದೊಡ್ಡ ಸವಾಲಾಗಿದೆ. ಇದರಿಂದಾಗಿ ರೈಲಿನಲ್ಲಿ ಸ್ವಯಂಚಾಲಿತ ಡೋರ್ ಕ್ಲೋಸ್ ವ್ಯವಸ್ಥೆ ಅಳವಡಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ರೈಲ್ವೆ ಇಲಾಖೆ ತಿಳಿಸಿದೆ.

ಥಾಣೆ ಜಿಲ್ಲೆಯಲ್ಲಿ ಸೋಮವಾರ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಮೃತಪಟ್ಟಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಕಾಲ್ವಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೈಲಿನಲ್ಲಿ ಕಿಕ್ಕಿರಿದ ಜನಸಂದಣಿ ಘಟನೆಗೆ ಕಾರಣ ಎಂದು ರೈಲ್ವೆ ಇಲಾಖೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *