Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಮುಂದುವರಿದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Spread the love

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ವರುಣ ಅಬ್ಬರಿಸಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲೂ ವರುಣಾರ್ಭಟ ಇರಲಿದೆ. ಹಳೆ ಮೈಸೂರು ಮತ್ತು ಬೆಂಗಳೂರು ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಕೊಡಗು, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಸಾಧಾರಣ ಮಳೆ ನಿರೀಕ್ಷೆ

ರಾಜಧಾನಿ ಬೆಂಗಳೂರಲ್ಲಿ ನಾಳೆ ಸಾಧಾರಣ ಮಳೆಯ ನಿರೀಕ್ಷೆ ಇದೆ. ಗುಡುಗು ಮತ್ತು ಮಿಂಚು ಸಹಿತ ವರುಣನ ಆಗಮನದ ಸಾಧ್ಯತೆ ಇದ್ದು, ಶೇಕಡಾ 86ರಿಂದ 100ರಷ್ಟು ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, 20 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ತಾಪಮಾನ ದಾಖಲಾಗಲಿದೆ. ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *