Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

Spread the love

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ.ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಗದಗ,ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 26ರವರೆಗೆ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

ಎಲ್ಲೆಲ್ಲಿ ಮಳೆಯಾಗಿದೆ? 

ಬೆಂಗಳೂರು ಜಿಕೆವಿಕೆ, ಚಾಮರಾಜನಗರ, ಬೆಂಗಳೂರು ನಗರ, ಟಿಜಿಹಳ್ಳಿ, ಕನಕಪುರ, ಹುನಗುಂದ, ನಾರಾಯಣಪುರದಲ್ಲಿ ಹೆಚ್ಚು ಮಳೆಯಾಗಿದೆ. ಹೊಸಕೋಟೆ, ಹೆಸರಘಟ್ಟ, ಕುಣಿಗಲ್, ಬಸವನ ಬಾಗೇವಾಡಿ, ಚಿತ್ತಾಪುರ, ಜೇವರ್ಗಿ, ನಲ್ವತವಾಡ, ಮಾಗಡಿ, ಎಲೆಕ್​ಟ್ರಾನಿಕ್​ ಸಿಟಿ, ಹಣಸಗಿ, ಬೆಳಗಾವಿ, ಕೆಂಭಾವಿ, ಕಕ್ಕೇರಿ, ಅಫ್ಜಲ್​ಪುರ, ಚಿಂಚೋಳಿ, ಗದಗದಲ್ಲಿ ಮಳೆಯಾಗಿದೆ.

ಬೆಳ್ಳೂರು, ಎಂಎಂ ಹಿಲ್ಸ್​,ಕೋಲಾರ, ಭಾಗಮಂಡಲ, ಬರಗೂರು, ಮದ್ದೂರು,ಮಧುಗಿರಿ, ಗೌರಿಬಿದನೂರು, ಬಾದಾಮಿ, ಸಿರಾ, ಕುಶಾಲನಗರ, ಕೋಲಾರ, ಸೈದಾಪುರ, ಲೋಕಾಪುರ, ಇಳಕಲ್, ಮುದ್ದೇಬಿಹಾರ, ಗಂಗಾವತಿ, ನಾಗಮಂಗಲ, ಕೃಷ್ಣರಾಜಸಾಗರ, ರಾಯಲ್ಪಾಡು, ಯಲಬುರ್ಗಾ, ರಬಕವಿ, ಮಿಡಿಗೇಶಿ, ಮುನೀರಾಬಾದ್, ಸಿಂಧಗಿ, ಚಿಕ್ಕೋಡಿ, ಖಾನಾಪುರ, ಬೀದರ್, ತಾವರೆಗೇರಾ, ಬೀದರ್, ಕಲಘಟಗಿಯಲ್ಲಿ ಮಳೆಯಾಗಿದೆ.

ಧಾರವಾಡ, ತೊಂಡೆಭಾವಿ, ನರಗುಂದ, ಬನವಾಸಿ, ಅಂಕೋಲಾ, ಪೊನ್ನಂಪೇಟೆ, ಅರಕಲಗೂಡು, ಪರಶುರಾಂಪುರ, ಬೇಗೂರು, ಹಿರಿಯೂರು, ಬೇಲೂರಿನಲ್ಲಿ ಮಳೆಯಾಗಿದೆ. ಬೀದರ್​ನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *