ರಾಜ್ಯದಲ್ಲಿ ಚಳಿಯ ನಡುವೆ ಮಳೆ ಅಬ್ಬರ: ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather Report) ವರದಿ ಮಾಡಿದೆ.ಬೆಂಗಳೂರು (Bengaluru) ಸೇರಿದಂತೆ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮೈ ಕೊರೆವ ಚಳಿಯ ನಡುವೆ ಇಂದು (ನ.24) ಮತ್ತು ನಾಳೆ (ನ.25) ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ತಿಳಿಸಿದೆದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
