Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಮನಗರ: ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹೆಡ್ ಕಾನ್ಸ್‌ಟೇಬಲ್ ಕೆರೆಯಲ್ಲಿ ಶವವಾಗಿ ಪತ್ತೆ

Spread the love

ರಾಮನಗರ: ಹೆಡ್ ಕಾನ್ಸ್‌ಟೇಬಲ್ (Head Constable) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.

ಲಕ್ಷ್ಮಣ್ (51) ಮೃತ ಹೆಡ್ ಕಾನ್ಸ್‌ಟೇಬಲ್. ಲಕ್ಷ್ಮಣ್ ಚನ್ನಪಟ್ಟಣ (Channapatna) ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮವಾರ ಕರ್ತವ್ಯಕ್ಕೆ ಲಕ್ಷ್ಮಣ್ ಗೈರು ಹಾಜರಾಗಿದ್ದು, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಕೆರೆಯಲ್ಲಿ ಲಕ್ಷ್ಮಣ್ ಶವವಾಗಿ ಪತ್ತೆಯಾಗಿದ್ದಾರೆ

ಹೆಲ್ಮೆಟ್ ಸಮೇತ ಲಕ್ಷ್ಮಣ್ ಬಿದ್ದಿದ್ದಾರೆ. ಕೆರೆ ಪಕ್ಕದಲ್ಲೇ ಬೈಕ್ ಕೂಡ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ಕಾಲು ಜಾರಿಬಿದ್ದಿರಬಹುದಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *