Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಮನಗರ ದುರಂತ: ಜಲಾಶಯದಲ್ಲಿ ಮೂವರು ಯುವತಿಯರು ಮುಳುಗಿ ಸಾವು

Spread the love

ರಾಮನಗರ: ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ರಾಮನಗರಜಿಲ್ಲೆ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್​ನಲ್ಲಿ ನಡೆದಿದೆ. ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಬೆಂಗಳೂರು ಮೂಲದ ರಾಘವಿ(18) ಮಧುಮಿತ(20), ಹಾಗೂ ರಮ್ಯಾ(22) ಎನ್ನುವರು ಮೃತಪಟ್ಟಿದ್ದಾರೆ.ಜಲಾಶಯ ವೀಕ್ಷಣೆಗೆಂದು ತೆರಳಿದ್ದ ಏಳು ಯುವತಿಯರು ಹೋಗಿದ್ದರು. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಎಲ್ಲರೂ ನೀರಿಗೆ ಬಿದ್ದಿದ್ದು, ಇದರಲ್ಲಿ ಮೂವರು ಯುವತಿಯರು ಮೃತಪಟ್ಟಿದ್ದಾರೆ. ಇನ್ನುಳಿದವರನ್ನು ಯುವಕನೋರ್ವ ರಕ್ಷಣೆ ಮಾಡಿದ್ದಾನೆ.

ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದ ಯುವತಿಯರು, ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಏಳು ಯುವತಿರು ನೀರಿಗೆ ಬಿದ್ದಾಗ ಸ್ಥಳದಲ್ಲಿದ್ದ ಯುವಕನೋರ್ವ ಕೆಲವರನ್ನು ರಕ್ಷಣೆ ಮಾಡಿದ್ದಾನೆ. ಆದ್ರೆ, ಏಳು ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *