Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೂಡಿಗೆರೆಯಲ್ಲಿ ಕಾಡುಕೋಣಗಳ ಅಟ್ಟಹಾಸ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ದಾಳಿ!

Spread the love

ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru) ವನ್ಯಜೀವಿಗಳು ಹಾಗೂ ಮಾನವ ಸಂಘರ್ಷ ಮುಂದುವರಿದಿದೆ. ಮೂಡಿಗೆರೆ (Mudigere) ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ಕಾಡುಕೋಣವೊಂದು (Wild Buffalo) ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಸತ್ಯ ಎಂಬ ಕೂಲಿ ಕಾರ್ಮಿಕನ ಮೇಲೆ ಕಾಡುಕೋಣ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಕಾರ್ಮಿಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕನಿಗೆ ಸೂಕ್ತ ಪರಿಹಾರ ನೀಡಬೇಕು. ಕಾಡುಕೋಣಗಳನ್ನು ಸ್ಥಳಾಂತರಿಸಬೇಕು ಎಂದು ಮಾಕನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ (Forest Department) ಆಗ್ರಹಿಸಿದ್ದಾರೆಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಡುಕೋಣ ದಾಳಿ ಪ್ರಕರಣಗಳು ಹೆಚ್ಚಾಗಿವೆ. ಇದರಿಂದ ಕಾರ್ಮಿಕರು ಕೆಲಸಕ್ಕೆ ತೋಟಗಳಿಗೆ ಹೋಗಲು ಭಯದ ವಾತಾವರಣ ನಿರ್ಮಾಣವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *