Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮದುವೆ ಆಸೆ ತೋರಿಸಿ ರೇಪ್‌, ಸಹಾಯಕ್ಕೆ ಬಂದವನಿಂದಲೂ ಅತ್ಯಾಚಾ*ರ ನಡೆಸಿ ಕೊ*ಲೆ!

Spread the love

ಭುವನೇಶ್ವರ: ಮದುವೆಯಾಗೋದಾಗಿ ನಂಬಿಸಿ ಯುವತಿಯನ್ನು ಪ್ರಿಯಕರನೇ ಅತ್ಯಾಚಾರಗೈದು, ಬಳಿಕ ಸಹಾಯಕ್ಕಾಗಿ ಬಂದವನು ಮತ್ತೆ ಅತ್ಯಾಚಾರ ಮಾಡಿ ಬಹುಮಹಡಿ ಕಟ್ಟಡದಿಂದ ಎಸೆದು ಕೊಲೆ ಮಾಡಿರುವ ಘಟನೆ ಒಡಿಶಾದ (Odisha)  ಜಗತಿಸಂಗ್‌ಪುರದಲ್ಲಿ ನಡೆದಿದೆ.
ಮೃತ ಯುವತಿಯನ್ನು 23 ವರ್ಷದವರೆಂದು ಗುರುತಿಸಲಾಗಿದ್ದು, ಹೆಸರನ್ನು ಬಹಿರಂಗಪಡಿಸಿಲ್ಲ. ಇಬ್ಬರು ಆರೋಪಿಗಳನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆಈ ಕುರಿತು ಜಗತಿಸಂಗ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದು, ಇಬ್ಬರು ಆರೋಪಿಗಳ ಪೈಕಿ ಓರ್ವ ಆರೋಪಿಯನ್ನು ಸಂತ್ರಸ್ತೆ ಪ್ರೀತಿಸುತ್ತಿದ್ದಳು. ದೇವಾಲಯದಲ್ಲಿ ಮದುವೆಯಾಗುವುದಾಗಿ ನಂಬಿಸಿ, ಮನೆ ಬಿಟ್ಟು ಬರುವಂತೆ ಹೇಳಿದ್ದ. ಅದರಂತೆ ಯುವತಿಯು ಫೆ.22ರಂದು ಮನೆ ಬಿಟ್ಟು ಬಂದಿದ್ದಳು. ಈ ವೇಳೆ ಏಕಾಂತ ಸ್ಥಳಕ್ಕೆ ಕರೆದೊಯ್ದ ಆರೋಪಿ ಯುವತಿಯ ಮೇಲೆ ಅತ್ಯಾಚಾರವೆಸಗಿ, ರಹಾಮ ಬಸ್ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದ್ದ ಎಂದು ತಿಳಿಸಿದ್ದಾರೆ.

ಬೈಕ್‌ನಲ್ಲಿ ಬಂದ ಮತ್ತೊಬ್ಬ ಜಾರ್ಖಂಡ್ ಮೂಲದ ಆರೋಪಿ ಬಸ್ ನಿಲ್ದಾಣದಲ್ಲೇ ನಿಂತಿದ್ದ ಯುವತಿಯನ್ನು ಕಂಡು ಸಹಾಯ ಮಾಡುವುದಾಗಿ ನಂಬಿಸಿದ್ದಾನೆ. ಬಳಿಕ ಪರದೀಪ್ ಪಟ್ಟಣದಲ್ಲಿರುವ ತಾನು ವಾಸವಿರುವ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ, ಛಾವಣಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯನ್ನು ಕಟ್ಟದ ಮೇಲಿಂದ ಎಸೆದು ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

ಮಾರನೇ ದಿನ ಬೆಳಿಗ್ಗೆ ಶವ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಆದರೆ ಇದಕ್ಕೂ ಮುನ್ನ ಮೃತಳ ಸಹೋದರ ಫೆ.22ರ ಸಂಜೆ ತಿರ್ಟೋಲ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದರು. ಜೊತೆಗೆ ಆಕೆಯ ಶವ ಪತ್ತೆಯಾದ ಬಳಿಕ ಅತ್ಯಾಚಾರ ಹಾಗೂ ಕೊಲೆ ಆರೋಪದಡಿ ಪರದೀಪ್ ಪೊಲೀಸ್ ಠಾಣೆಯಲ್ಲಿ ಫೆ.25ರಂದು ದೂರು ನೀಡಿದ್ದರು.
ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಅಪಹರಣ, ಅತ್ಯಾಚಾರ ಹಾಗೂ ಕೊಲೆ ಸಂಬಂಧ ಬಿಎನ್‌ಎಸ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *