Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಐಪಿಎಲ್ ಚಾಂಪಿಯನ್ ಆಗಿ ಬೆಂಗಳೂರಿಗೆ ಬಂದ ಆರ್‌ಸಿಬಿ: ಸೆಲೆಬ್ರೇಷನ್ ವೇಳೆ ಸಂಚಾರ ಮಾರ್ಗದಲ್ಲಿ ಬದಲಾವಣೆ

Spread the love

ಬೆಂಗಳೂರು: ಗುಜರಾತ್​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್  (IPL) ಫೈನಲ್​ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್​ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿದೆ. ಆರ್​ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಆಟಗಾರರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೀಗಾಗಿ, ಮಧ್ಯಾಹ್ನ 3 ಗಂಟೆ ನಂತರ ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

‘‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​​ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ. ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ’’ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

ಆರ್​ಸಿಬಿ ಆಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸುವ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕರೆದೊಯ್ಯಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ, ಭದ್ರತೆಯ ದೃಷ್ಟಿಯಿಂದ ಅದಕ್ಕೆ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಈಗಾಗಲೇ ತಿಳಿಸಿದ್ದಾರೆ.

ಆದಾಗ್ಯೂ, ವಿಧಾನಸೌಧ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ಆರ್​​ಸಿಬಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಆರ್​​ಸಿಬಿ ಜೆರ್ಸಿ ಧರಿಸಿ, ಫ್ಲ್ಯಾಗ್ ಹಿಡಿದು ಅಭಿಮಾನಿಗಳು ಸೇರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರು, ಯುವಕರು ಆಗಮಿಸಿದ್ದು, ಆರ್​​ಸಿಬಿ ಆಟಗಾರರನ್ನು ಹತ್ತಿರದಿಂದ ನೋಡಲು ಕಾತರದಿಂದ ಇದ್ದಾರೆ. ಆರ್​​ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *