Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆರ್‌ಸಿಬಿ ಸಂಭ್ರಮದಲ್ಲಿ ಸಂಭವಿಸಿದ ಕಾಲ್ತುಳಿತ: ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ತೀರ್ಮಾನ

Spread the love

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಆರ್​ಸಿಬಿ, ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ  ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೂಡ ಸಚಿವ ಸಂಪುಟ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ಕ್ರಿಮಿನಲ್ ಕೇಸ್: ಯಾರಿಗೆಲ್ಲ ಸಂಕಷ್ಟ?

ಇದೀಗ ಸಚಿವ ಸಂಪುಟ ಕ್ರಿಮಿನಲ್ ಕೇಸ್​​ಗೆ ತೀರ್ಮಾನ ಕೈಗೊಂಡಿರುವುದರಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್​​ಸಿಬಿ ತಂಡದ ರಾಜೇಶ್ ಮೆನನ್, ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್​​ ಎಂಡಿ ವೆಂಕಟ್ ವರ್ಧನ್ , ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ ಸಂಕಷ್ಟ ಎದುರಾಗಲಿದೆ.

ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್​ ಬಿ.ದಯಾನಂದ್​, ಐಪಿಎಸ್​ ಅಧಿಕಾರಿಗಳಾದ ವಿಕಾಸ್​ ಕುಮಾರ್​ ವಿಕಾಸ್​, ಶೇಖರ್​, ಕಬ್ಬನ್ ಪಾರ್ಕ್ ಸಬ್​ ಡಿವಿಷನ್​ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್‌ ಠಾಣೆಯ ಪಿಐ​ ಗಿರೀಶ್ ವಿರುದ್ಧವೂ ಪ್ರಕರಣ ದಾಖಲಾಗಲಿದೆ.

ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಸುಮಾರು 40 ಮಂದಿ ಗಾಯಗೊಂಡಿದ್ದರು. ಘಟನೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ರಾಜಕೀಯವಾಗಿಯೂ ತೀವ್ರ ಗದ್ದಲಕ್ಕೆ ಕಾರಣವಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *