ಟೀಮ್ ಇಂಡಿಯಾ ಪರ ಕಂಬ್ಯಾಕ್‌ಗೆ ಸಿದ್ಧ: ಮತ್ತೊಮ್ಮೆ ಭಾರತ ತಂಡವನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ ಭುವನೇಶ್ವರ್ ಕುಮಾರ್!

ಲಕ್ನೋ: ಮತ್ತೊಮ್ಮೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಸಿದ್ಧ ಎಂದು ಭಾರತ ಕ್ರಿಕೆಟ್ ತಂಡದ ಸ್ವಿಂಗ್ ಮಾಂತ್ರಿಕ ಭುವನೇಶ್ವರ್ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ತಂಡಕ್ಕೆ ಮರಳಿ ಆಯ್ಕೆಯಾಗುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನನಗೆ ಮತ್ತೆ ಕರೆ ಬಂದರೆ ನಾನು ಬೇಡ ಎನ್ನಲು ಹೇಗೆ ಸಾಧ್ಯ? ನಾನು ಆಡಲು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ” ಎಂದಿದ್ದಾರೆ.”ಆಯ್ಕೆ ಮಾಡುವುದಾದರೆ, ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ನಾನಂತು ರೆಡಿ ಇದ್ದೇನೆ. ಮೊದಲು ಆಯ್ಕೆ ಮಾಡಲಿ, ಆಯ್ಕೆ ಮಾಡಬೇಡಿ ಎಂದು ನಾನಂತು ಹೇಳಿಲ್ಲ. ಹಾಗೆ ಹೇಳಲು ಹೇಗೆ ಸಾಧ್ಯ. ಹೀಗಾಗಿ ನಾನು ಸಹ ಕಂಬ್ಯಾಕ್ ಅನ್ನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.”ಭಾರತ ತಂಡಕ್ಕೆ ಮರಳುವ ಆಸೆ ಇದ್ದರೂ, ಅದನ್ನೇ ಯೋಚಿಸುತ್ತಾ ತಮಗೆ ತಾವೇ ಒತ್ತಡ ಹೇರಿಕೊಳ್ಳುತ್ತಿಲ್ಲ. ನಾನು ಈಗಾಗಲೇ ಭಾರತದ ಪರ ಆಡುವ ನನ್ನ ಕನಸನ್ನು ನನಸು ಮಾಡಿಕೊಂಡಿದ್ದೇನೆ. ಈಗ ನಾನು ಕೇವಲ ಕ್ರಿಕೆಟ್ ಮೇಲಿನ ಪ್ರೀತಿಗಾಗಿ ಆಡುತ್ತಿದ್ದೇನೆ. ಸದ್ಯ ನನ್ನ ವೃತ್ತಿಜೀವನ ಇರುವ ಸ್ಥಿತಿಯ ಬಗ್ಗೆ ನನಗೆ ತೃಪ್ತಿ ಮತ್ತು ನೆಮ್ಮದಿಯಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.