ಮಣಿಪಾಲದಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ -ಕೇರಳ ಯುವಕ ಅರೆಸ್ಟ್

ಉಡುಪಿ: ಕೇರಳದ ಯುವಕನೋರ್ವ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಘಟನೆ ಮಣಿಪಾಲದಲ್ಲಿ ನಡೆದಿದ್ದು, ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಕೇರಳ ಕಣ್ಣೂರಿನ ಕಂಡಗನ್ ನಿವಾಸಿ ಶೋಹೈಲ್ ನೀಲಾಕತ್(26) ಎಂದು ಗುರುತಿಸಲಾಗಿದೆ. ಅಗಸ್ಟ್ 11ರಂದು ಬೆಳಗ್ಗೆ ಮಣಿಪಾಲ ಎಂಐಟಿ ಜಂಕ್ಷನ್ ಬಳಿ ನಡೆದಿದೆ. ಮಣಿಪಾಲ ಅಂಚೆ ಕಚೇರಿ ಎದುರು ಆರೋಪಿ ಯುವಕ ಎಂಬಾತ ತನ್ನ ಕಾರಿಗೆ ಸಂಪೂರ್ಣ ಟಿಂಟ್ ಅಳವಡಿಸಿಕೊಂಡು ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಅಜಾಗರೂಕತೆಯಿಂದ ಮಾನವ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳಿಗೆ ಅಪಘಾತ ಉಂಟು ಮಾಡುವ ರೀತಿಯಲ್ಲಿ, ವಿಪರೀತ ಕರ್ಕಶ ಶಬ್ದ ಮಾಡಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗಿದ್ದಾನೆ.
