Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂತ್ರಾಲಯದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ: 34 ದಿನಗಳ ಕಾರ್ತಿಕ ಮಾಸದ ಅವಧಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿಗೆ 5.41 ಕೋಟಿ ರೂ. ಹರಿದು ಬಂದ ಕಾಣಿಕೆ!

Spread the love

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 34 ದಿನದಲ್ಲಿ ದಾಖಲೆಯ 5.41 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಕಾರ್ತಿಕ ಮಾಸ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಹರಿದು ಬಂದಿದ್ದ ಭಕ್ತ ಸಾಗರದಿಂದ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಬಂದಿದೆ. ಸಂಗ್ರಹವಾದ ಕಾಣಿಕೆಯಲ್ಲಿ 5,26,89,128 ರೂ. ಕರೆನ್ಸಿ ನೋಟುಗಳು, 14,58,100 ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ. 80 ಗ್ರಾಂ ಚಿನ್ನ, 1,610 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ.

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *