Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಗ್ರಿಗೋಲ್ಡ್ ಸಂತ್ರಸ್ತರಿಗೆ ಚುನಾವಣೆಗೂ ಮುನ್ನ ಹಣ ಮರುಪಾವತಿಸಿ: ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ!

Spread the love

ಮಂಗಳೂರು: ಅಗ್ರಿಗೋಲ್ಡ್ ಹಗರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಲಕ್ಷಾಂತರ ಗ್ರಾಹಕರ ಹೂಡಿಕೆ ಹಣ ಮರುಪಾವತಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ ದಾಖಲೆ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗ್ರಾಹಕರ ಹಣವನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಅಖಿಲ ಭಾರತ ಅಗ್ರಿಗೋಲ್ಡ್ ಗ್ರಾಹಕ ಮತ್ತು ಪ್ರತಿನಿಧಿಗಳ ಹಿತರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ಸಿ. ರಾಘವೇಂದ್ರ ಕುಂಬ್ಳೆ ಆಗ್ರಹಿಸಿದ್ದಾರೆ.

ಅಗ್ರಿಗೋಲ್ಡ್ ಸಂತ್ರಸ್ತರು ಹಲವು ವರ್ಷಗಳಿಂದ ತಮ್ಮ ಜೀವನದ ಉಳಿತಾಯದ ಹಣವನ್ನು ಮರಳಿ ಪಡೆಯಲು ಕಾಯುತ್ತಿದ್ದಾರೆ. ಇದೀಗ ಸರ್ಕಾರ ದಾಖಲೆ ಪರಿಶೀಲನೆಗೆ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ ದಾಖಲೆ ಪರಿಶೀಲನೆ ನಡೆಸುವುದಷ್ಟೇ ಸಾಲದು, ಗ್ರಾಹಕರಿಗೆ ಅವರ ಹೂಡಿಕೆ ಹಣ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ಅಗ್ರಿಗೋಲ್ಡ್ ಸಂತ್ರಸ್ತರ ಹಣವನ್ನು ಮರುಪಾವತಿ ಮಾಡಬೇಕು. ವರ್ಷಗಳಿಂದ ಹಣಕ್ಕಾಗಿ ಕಾಯುತ್ತಿರುವ ಗ್ರಾಹಕರು ಹಾಗೂ ಏಜೆಂಟರಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಹಣ ಮರುಪಾವತಿ ಮಾಡದಿದ್ದರೆ, ಕೋಟ್ಯಂತರ ಗ್ರಾಹಕರು ಮತ್ತು ಏಜೆಂಟರು ಒಗ್ಗಟ್ಟಾಗಿ ಚುನಾವಣೆ ಬಹಿಷ್ಕಾರ ಅಥವಾ ನೋಟಾ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಈ ಮೂಲಕ ಸರ್ಕಾರದ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸಲು ಮುಂದಾಗಬೇಕಾಗುತ್ತದೆ ಎಂದು ಸಿ. ರಾಘವೇಂದ್ರ ಕುಂಬ್ಳೆ ಎಚ್ಚರಿಕೆ ನೀಡಿದ್ದಾರೆ.

ಆದ್ದರಿಂದ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ದಾಖಲೆ ಪರಿಶೀಲನೆಯ ನಂತರ ಹಣ ಮರುಪಾವತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ಅಗ್ರಿಗೋಲ್ಡ್ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *