Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮದುವೆ ವೇದಿಕೆಯಿಂದಲೇ ನಿರಾಕರಣೆ: ದೇವಾಲಯದಲ್ಲಿ ಪ್ರಿಯಕರನೊಂದಿಗೆ ಸರಳ ವಿವಾಹ

Spread the love

ಹಾಸನ: ತಾಳಿ ಕಟ್ಟುವ ವೇಳೆ ನಂಗೆ ಈ ವರನ ಜೊತೆಗೆ ಮದುವೆ ಬೇಡ ಎಂದಿದ್ದ ವಧು ಕಡೆಗೂ ತನ್ನ ಪ್ರಿಯಕರನ ಜೊತೆ ವಿವಾಹವಾಗಿದ್ದಾರೆ. ತನ್ನ ಪ್ರಿಯಕರ ರಘು ಎಂಬವರರಿಂದ ವಧು ಪಲ್ಲವಿ ತಾಳಿ ಕಟ್ಟಿಸಿಕೊಂಡಿದ್ದಾರೆ. ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿರುವ ಗಣಪತಿ ದೇವಾಲಯದಲ್ಲಿ ಪಲ್ಲವಿ ಹಾಗೂ ರಘು ಪೋಷಕರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಆಗಿದ್ದಾರೆ.

ಪಲ್ಲವಿ ಪತಿ ರಘು ಹಾಸನ ತಾಲೂಕಿನ ಬಸವನಹಳ್ಳಿ ನಿವಾಸಿಯಾಗಿದ್ದಾರೆ.

ಹಾಸನ ಹೊರವಲಯ ಬೂವನಹಳ್ಲಿಯ ಪಲ್ಲವಿ ಮತ್ತು ಆಲೂರು ತಾಲ್ಲೂಕಿನ ಸರ್ಕಾರಿ ಶಾಲೆಯ ಶಿಕ್ಷಕ ನಡುವೆ ವಿವಾಹ ನಿಶ್ಚಯವಾಗಿತ್ತು. ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ (ಮೇ.23) ಬೆಳಗ್ಗೆ 9 ಗಂಟೆಗೆ ವರ, ವಧು ಪಲ್ಲವಿಗೆ ತಾಳಿ ಕಟ್ಟಬೇಕಿತ್ತು. ಆದರೆ, ತಾಳಿ ಕಟ್ಟುವ ವೇಳೆ ವಧು ಪಲ್ಲವಿ ತಲೆ ಅಲ್ಲಾಡಿಸಿ ನನಗೆ ಈ ಮದುವೆ ಬೇಡ ಎಂದಿದ್ದರು.

ತಾಳಿ ಕಟ್ಟುವ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿತ್ತು. ಆಗ ವಧು ಪಲ್ಲವಿ ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರೂ ಕೇಳದ ವಧು ಪಲ್ಲವಿ ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದರು. ತಾಳಿ ಕೈಯಲ್ಲಿ ಹಿಡಿದು ಮದುಮಗ ಮಾಡಿದ ಮನವೊಲಿಕೆಗೂ ಪಲ್ಲವಿ ಮನಸ್ಸು ಕರಗಲಿಲ್ಲ. ಕಲ್ಯಾಣ ಮಂಟಪದಲ್ಲಿ ಗೊಂದಲ ಹಾಗೂ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

ಹೆಣ್ಣಿನ ಅಪ್ಪ-ಅಮ್ಮ ಹಾಗೂ ಕುಟುಂಬಸ್ಥರು ಯುವತಿಯ ಮನವೊಲಿಕೆ ಮಾಡಿದ್ದರೂ ಆಕೆ ಒಪ್ಪಿರಲಿಲ್ಲ. ಈ ವೇಳೆ ಪೊಲೀಸರು ಮಧ್ಯಪ್ರವೇಶ ಮಾಡಿದ್ದರು. ಪೊಲೀಸರ ಬಳಿ ಕೂಡ ಯುವತಿ ತಾನು ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಹೇಳಿದ್ದಾರೆ. ರಘು ಎಂಬಾತನನ್ನು ಪಲ್ಲವಿ ಪ್ರೀತಿಸುತ್ತಿರುವ ವಿಚಾರ ಗೊತ್ತಾಗಿತ್ತು. ಇದೀಗ, ಪಲ್ಲವಿ ತಾನು ಇಷ್ಟಪಟ್ಟ ಹುಡುಗನ ಜೊತೆಗೆನೇ ವಿವಾಹವಾಗಿದ್ದಾರೆ. ಮದುವೆ ಅರ್ಧದಲ್ಲೇ ನಿಂತುಹೋಗಿದ್ದ ಕಲ್ಯಾಣ ಮಂಟಪದ ಆವರಣದಲ್ಲೇ ಈ ದೇವಾಲಯ ಇದ್ದು, ಗಣಪತಿ ದೇವಾಲಯದ ಆವರಣದಲ್ಲಿ ಸರಳ ವಿವಾಹ ನಡೆದಿದೆ. ಕೆಲ ಸ್ನೇಹಿತರು ಸಂಧಾನಕಾರರ ಮಧ್ಯಸ್ಥಿಕೆಯಲ್ಲಿ ಈ ವಿವಾಹ ನೆರವೇರಿದೆ.


Spread the love
Share:

administrator

Leave a Reply

Your email address will not be published. Required fields are marked *