Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜೈಲಿನಿಂದ ಬಿಡುಗಡೆಯಾದ 2 ದಿನದಲ್ಲೇ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

Spread the love

CRIME NEWS: 2 ದಿನಗಳ ಹಿಂದೆ ಜೈಲಿನಿಂದ ರಿಲೀಸ್! 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ!

ಚೆನ್ನೈ: ಎರಡು ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾದ ವ್ಯಕ್ತಿ, ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಸಂಜೆ ವಾಕಿಂಗ್‌ಗೆ ಹೋಗಿದ್ದ 80 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

23 ವರ್ಷದ ಆರೋಪಿಯನ್ನು ಕಳ್ಳತನ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟಲಾಗಿತ್ತು.

ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.

ಮಹಿಳೆಯ ಮೇಲೆ ಅತ್ಯಾಚಾರ ಮಾಡಿದಾಗ ಆರೋಪಿ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಸಂತ್ರಸ್ತ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ‘ನಾವು ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ. ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಬಲವಾದ ಪುರಾವೆಗಳು ಸಿಕ್ಕಿವೆ. ಸಂತ್ರಸ್ತ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲು ಪ್ರಯತ್ನಿಸಿದಾಗ, ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಆದ್ದರಿಂದ ಆರೋಪಿ ಕಾಲಿಗೆ ಗುಂಡು ಹಾರಿಸಿ ಕಸ್ಟಡಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಏರಿಕೆಯಾಗುತ್ತಿವೆ ಎಂದು ಎಂದು ಆಡಳಿತಾರೂಢ ಡಿಎಂಕೆ ವಿರುದ್ಧ ವಿರೋಧ ಪಕ್ಷ AIADMK ವಾಗ್ದಾಳಿ ನಡೆಸಿದೆ.

‘ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಆಡಳಿತದಲ್ಲಿ ತಮಿಳುನಾಡು ಎತ್ತ ಸಾಗುತ್ತಿದೆ ಎಂದು ಯಾರಿಗೂ ತಿಳಿದಿಲ್ಲ. ಅವರು ಮಾದಕ ದ್ರವ್ಯ ಪಿಡುಗನ್ನು ನಿರ್ಮೂಲನೆ ಮಾಡುತ್ತಾರೆ ಎಂಬ ನಂಬಿಕೆ ಜನರಿಗೆ ಇಲ್ಲ’ ಎಂದು ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *