Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಳೆಯ ಸರ್ಕಾರಿ ವಾಹನಗಳಿಗೆ ಮುಕ್ತಿ: 15 ವರ್ಷ ಮೀರಿದ 18,552 ವಾಹನಗಳ ಸ್ಕ್ರ್ಯಾಪಿಂಗ್‌ಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ!

Spread the love

ಬೆಳಗಾವಿ/ಬೆಂಗಳೂರು: 15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‌ಗೆ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ್‌ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ (Registered Vehicle Scrapping Facility) ಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆ.12 ರಂದು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ಡಿ.4ರ ಅಂತ್ಯಕ್ಕೆ 15 ವರ್ಷದ ಅವಧಿ ಮೀರಿದ ಒಟ್ಟು 18,552 (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೋರ್ಟಲ್‌ನಲ್ಲಿ ರದ್ದುಪಡಿಸಿದೆ. ಈ 18,552 ವಾಹನಗಳ ಪೈಕಿ ಆರ್‌ವಿಎಸ್‌ಎಫ್‌ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ. 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದರು.

2023 ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3,212 ವಾಹನಗಳು ನಿಷ್ಕ್ರಿಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರಿಯಗೊಳಿಸಲು ಬಾಕಿ ಇದೆ ಎಂದು ಮಾಹಿತಿ ನೀಡಿದರು.


Spread the love
Share:

administrator

Leave a Reply

Your email address will not be published. Required fields are marked *