Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನೀಡಲು ಕೋರ್ಟ್ ಅನುಮತಿ!

Spread the love

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ (Renuakswamy Case) ಕೇಸ್‌ಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ (Pavithra Gowda) ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ.

ಇಂದು (ಜ.12) ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡುವ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಜೊತೆಗೆ ಆರೋಗ್ಯದಲ್ಲಿ ವ್ಯತ್ಯಾಸವಾದ್ರೆ ವೈದ್ಯರ ಸಲಹೆ ಮೇರೆಗೆ ಊಟ ನೀಡಬೇಕು ಎಂದು ತಿಳಿಸಿದೆ.

ಈ ಮೊದಲು ಆರೋಪಿ ಪವಿತ್ರಾ ಗೌಡ ಸೇರಿ ನಾಗರಾಜು, ಲಕ್ಷ್ಮಣ್ ಜೈಲಿನಲ್ಲಿ ಒಳ್ಳೆಯ ಊಟ ಇಲ್ಲ, ಇದರಿಂದ ಅನಾರೋಗ್ಯ ಉಂಟಾಗುತ್ತಿದೆ. ಹೀಗಾಗಿ ಮನೆಯೂಟಬೇಕೆಂದು ಕೋರ್ಡ್‌ಗೆ ಅರ್ಜಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಮೂವರಿಗೆ ದಿನಕ್ಕೊಂದು ಬಾರಿ ಮನೆಯೂಟ ನೀಡಲು ಅವಕಾಶ ನೀಡಿತ್ತು. ಆದರೆ ಕಾರಾಗೃಹ ಇಲಾಖೆ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು ನೀಡಿದರೆ ಮುಂದೆ ಎಲ್ಲಾ ಆರೋಪಿಗಳು ಇದೇ ಆದೇಶದ ಮೇಲೆ ಮನೆ ಊಟವನ್ನು ಕೇಳುವ ಸಾಧ್ಯತೆ ಇರುವುದರಿಂದ ಮನೆ ಊಟ ನೀಡುವುದಿಲ್ಲ ಎಂದು ತಿಳಿಸಿದ್ದರು.

ಮನೆ ಊಟ ಬಂದರೆ ಪರಿಶೀಲನೆ ಮಾಡಿದ ಬಳಿಕ ಜೈಲಿನ ಒಳಗೆ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ತಂಡ ಬೇಕಾಗುತ್ತದೆ. ಪರಪ್ಪನ ಅಗ್ರಹಾರದಲ್ಲಿ ಇರುವ 3 ಸಾವಿರ ಆರೋಪಿಗಳು ಇದೇ ಆದೇಶದ ಮೇಲೆ ಅರ್ಜಿ ಹಾಕಿದ್ದರೆ ಕಷ್ಟ ಆಗುತ್ತದೆ. ಹೀಗಾಗಿ ಮನೆ ಊಟ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ಅದಾದ ಬಳಿಕ ಆರೋಪಿ ಪವಿತ್ರಗೌಡ ಪರ ವಕೀಲ ನಾರಾಯಣಸ್ವಾಮಿ ನ್ಯಾಯಾಲಯಕ್ಕೆ ಪುನಃ ಅರ್ಜಿ ಸಲ್ಲಿಸಿ, ಪವಿತ್ರಗೌಡಗೆ ಜೈಲೂಟದಿಂದ ಸಮಸ್ಯೆ ಆಗ್ತಿದೆ. ಚರ್ಮರೋಗದಿಂದ ಬಳಲುತ್ತಿದ್ದಾರೆ. ಮೈಮೇಲೆ ಗುಳ್ಳೆಗಳು ಆಗುತ್ತಿದೆ. ಅದಕ್ಕಾಗಿಯೇ ನಾವು ಮನೆಯೂಟಕ್ಕೆ ಬೇಡಿಕೆ ಇಟ್ಟಿದ್ದು, ಜೈಲೂಟದಿಂದ ಫುಡ್‌ಪಾಯಿಸನ್ ಕೂಡ ಆಗ್ತಿದೆ ಎಂದು ವಾದಿಸಿದ್ದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳು ಮಂಗಳವಾರ (ಜ.13) ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸೂಚನೆ ನೀಡಿದೆ


Spread the love
Share:

administrator

Leave a Reply

Your email address will not be published. Required fields are marked *