ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ರದ್ದುಗೊಳಿಸಿದ್ದ ಆದೇಶ ಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್‌ಗೆ ಪವಿತ್ರಾ ಗೌಡ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ (Pavithra Gowda) ಅರ್ಜಿ ಸಲ್ಲಿಸಿದ್ದಾರೆ.

ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ.
ಈ ಕುರಿತು ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ. ಪವಿತ್ರ ಗೌಡ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್ ಆದೇಶದ ಪುನರ್ ಪರಿಶೀಲನೆ ಕೋರಿದ್ದಾರೆ. ಗುರುವಾರ ನ್ಯಾ. ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪುನರ್ ಪರಿಶೀಲನಾ ಅರ್ಜಿಯ ಪ್ರತಿಯನ್ನ ರಾಜ್ಯ ಸರ್ಕಾರದ ಪರ ವಕೀಲರಿಗೆ ಇನ್ನೂ ನೀಡಿಲ್ಲ. ಅರ್ಜಿ ಪ್ರತಿ ನೀಡಿದರೆ ಯಾವ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದಾರೆನ್ನುವುದು ತಿಳಿಯಲಿದೆ. ಗುರುವಾರ ಚೇಂಬರ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಬಳಿಕ ಮುಂದಿನ ಪ್ರಕ್ರಿಯೆ ನಡೆಯಬಹುದು ಎಂದು ಹೇಳಿದ್ದಾರೆ