Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್‍ನಿಂದ ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌

Spread the love

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರಿಗೆ 2 ತಿಂಗಳು ರಿಲೀಫ್‌ ಸಿಕ್ಕಿದೆ.

ದರ್ಶನ್ ಮತ್ತು ಇತರೇ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ‌ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಪೀಠದಲ್ಲಿ ನಡೆಯಿತು. 

ಕಲಾಪ ಆರಂಭವಾಗುತ್ತಿದ್ದಂತೆ ಸರ್ಕಾರಿ ವಕೀಲರು ಮನ್ಷನ್‌ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್‌ ಬೇಸಿಗೆ ರಜೆ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿತು.

ಜುಲೈ 14ಕ್ಕೆ ಸುಪ್ರೀಂ ಕೋರ್ಟ್‌ಗೆ ಬೇಸಿಗೆ ರಜೆ ಅಂತ್ಯವಾಗಲಿದೆ. ಹೀಗಾಗಿ ಅಲ್ಲಿಯವರೆಗೆ ದರ್ಶನ್‌ ಮತ್ತು ಇತರೇ ಆರೋಪಿಗಳಿಗೆ ರಿಲೀಫ್‌ ಸಿಕ್ಕಿದೆ. 

2024ರ ಡಿ.13ರಂದು ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.


Spread the love
Share:

administrator

Leave a Reply

Your email address will not be published. Required fields are marked *