Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಮೆರಿಕಕ್ಕೆ ತಿರುಗೇಟು: ‘ಶತ್ರು ನೆಲೆಗಳ’ ಮೇಲೆ ಇರಾನ್‌ನಿಂದ ಭೀಕರ ಕ್ಷಿಪಣಿ ಮತ್ತು ಡ್ರೋನ್ ದಾಳಿ!

Spread the love

ಟೆಹ್ರಾನ್: ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ನಿರಂತರ ದಾಳಿಗಳಿಗೆ ಪ್ರತಿಯಾಗಿ, ಈ ಪ್ರದೇಶದಲ್ಲಿನ ‘ಶತ್ರು ನೆಲೆಗಳು’ ಎಂದು ಗುರುತಿಸಲಾದ ಸ್ಥಳಗಳ ಮೇಲೆ ಇರಾನ್ ಸೇನೆ ಹಾಗೂ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದೊಡ್ಡ ಪ್ರಮಾಣದ ಕ್ಷಿಪಣಿ ಮತ್ತು ಡೋನ್ ದಾಳಿಗಳನ್ನು ನಡೆಸಿವೆ ಎಂದು ಇರಾನ್‌ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ನ ನೂರ್ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಕಳೆದ 48 ಗಂಟೆಗಳಲ್ಲಿ ‘ಶತ್ರು ಚಲನವಲನಗಳು’ ಕಂಡುಬಂದ ಹಿನ್ನೆಲೆಯಲ್ಲಿ ಗುರುತಿಸಲಾದ ಗುರಿಗಳನ್ನು ಉದ್ದೇಶಿಸಿ ಈ ಕಾರ್ಯಾಚರಣೆ ಆರಂಭಿಸಲಾಗಿದೆ. ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ನಿರಂತರ ದಾಳಿಗಳಿಗೆ ಪ್ರತಿಕ್ರಿಯೆಯಾಗಿಯೇ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಇರಾನ್‌ನ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಶತ್ರು ನೆಲೆಗಳು’ ಎಂದು ಗುರುತಿಸಲಾದ ಪ್ರದೇಶಗಳ ಮೇಲೆ ಕ್ಷಿಪಣಿ ಹಾಗೂ ಡೋನ್‌ಗಳನ್ನು ಬಳಸಿ ವ್ಯಾಪಕ ದಾಳಿ ನಡೆಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ದಾಳಿಯಲ್ಲಿ ಯಾವೆಲ್ಲ ಸ್ಥಳಗಳು ಗುರಿಯಾಗಿವೆ, ಎಷ್ಟು ಪ್ರಮಾಣದ ಹಾನಿಯಾಗಿದೆ ಅಥವಾ ಸಾವು-ನೋವು ಸಂಭವಿಸಿದ್ದೆಯೇ ಎಂಬ ಬಗ್ಗೆ ಇರಾನ್ ಅಧಿಕಾರಿಗಳು ತಕ್ಷಣದ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು Aljazeera ವರದಿ ಮಾಡಿದೆ.


Spread the love
Share:

administrator

Leave a Reply

Your email address will not be published. Required fields are marked *