ಕೊಡಗಿನಲ್ಲಿ ಟ್ರಾಫಿಕ್ ಪೊಲೀಸ್ ಭಯಕ್ಕೆ ಬಲಿಯಾದ ಸವಾರಪತಿ ಸಾ*ವು, ಪತ್ನಿ ಗಂಭೀರ

ಮಡಿಕೇರಿ: ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್ ಸವಾರ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮರೂರು ಗ್ರಾಮದ ನಟೇಶ್ (31) ಮೃತ ವ್ಯಕ್ತಿಯಾಗಿದ್ದು, ಅವರ ಪತ್ನಿ ದಿವ್ಯಾ (30) ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ದಿವ್ಯಾರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದ್ದು, ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
