Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಏಕದಿನ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ ನಿವೃತ್ತಿ?: ವದಂತಿಗಳಿಗೆ ಬಿಸಿಸಿಐ ಸ್ಪಷ್ಟೀಕರಣ!

Spread the love

ಹೊಸದಿಲ್ಲಿ : ಲಾರ್ಡ್ಸ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಪಂದ್ಯವಾಗಬಹುದು ಎಂಬ ನಿವೃತ್ತಿಯ ಊಹಾಪೋಹಗಳನ್ನು ತಳ್ಳಿಹಾಕಿರುವ ಬಿಸಿಸಿಐ, ಇದು ಅವರ ಕೊನೆಯ ಏಕದಿನ ಪಂದ್ಯವಾಗಲಿದೆ ಎಂಬ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, “ಮಾಧ್ಯಮಗಳಲ್ಲಿ ರೋಹಿತ್ ಶರ್ಮಾ ಅವರ ಕ್ರಿಕೆಟ್ ಭವಿಷ್ಯದ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಭಾನುವಾರ ಲಾರ್ಡ್ಸ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯವೇ ರೋಹಿತ್ ಅವರಿಗೆ ಕೊನೆಯ ಏಕದಿನ ಪಂದ್ಯವಾಗಲಿದೆ ಎಂಬ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ನಾನು ದೃಢವಾಗಿ ಹೇಳಲು ಬಯಸುತ್ತೇನೆ,” ಎಂದು ಸ್ಪಷ್ಟಪಡಿಸಿದ್ದಾರೆ.

“ರೋಹಿತ್ ಭಾರತೀಯ ಏಕದಿನ ತಂಡದ ಖಾಯಂ ಸದಸ್ಯರಾಗಿದ್ದು, ಆಯ್ಕೆದಾರರ ಯೋಜನೆಯಲ್ಲಿ ಇರುವವರೆಗೂ ಅವರು ದೇಶವನ್ನು ಪ್ರತಿನಿಧಿಸುವುದನ್ನು ಮುಂದುವರಿಸಲಿದ್ದಾರೆ. ಸರಳವಾಗಿ ಹೇಳಬೇಕೆಂದರೆ, ಲಾರ್ಡ್ಸ್ ಏಕದಿನ ಪಂದ್ಯ ಅವರ ಕೊನೆಯ ಪಂದ್ಯವಲ್ಲ” ಎಂದು ಅವರು ತಿಳಿಸಿದ್ದಾರೆ.
2027ರ ಏಕದಿನ ವಿಶ್ವಕಪ್‌ಗೆ ಸಿದ್ಧತೆಗಳು ಚುರುಕುಗೊಳ್ಳುತ್ತಿರುವುದರಿಂದ, ಪ್ರತಿಯೊಬ್ಬ ಆಟಗಾರನ ಫಾರ್ಮ್ ಮತ್ತು ಫಿಟೈಸ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಆಯ್ಕೆದಾರರು ನಿರ್ಧರಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅವರಿಗೂ ಇನ್ನು ಮುಂದೆ ತಂಡದಲ್ಲಿ ಸ್ಥಾನದ ಗ್ಯಾರಂಟಿ ಇರುವುದಿಲ್ಲ ಎಂದು ಹೇಳಲಾಗಿತ್ತು.
ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದು ಅಪರೂಪದ ಮೈಲಿಗಲ್ಲಿನ ಹೊಸ್ತಿಲಲ್ಲಿದ್ದಾರೆ. ಅವರು ಇನ್ನು ಕೇವಲ 13 ಏಕದಿನ ಪಂದ್ಯಗಳನ್ನು ಆಡಿದರೆ, ವಿಶ್ವ ಕ್ರಿಕೆಟ್‌ನಲ್ಲಿ 300 ಏಕದಿನ ಪಂದ್ಯಗಳನ್ನಾಡಿದ 8ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *