Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನೋಯ್ಡಾದಲ್ಲಿ ಚಲಿಸುವ ಬೈಕ್‌ನಲ್ಲಿ ಜೋಡಿಹಕ್ಕಿಗಳ ರೊಮ್ಯಾನ್ಸ್: ವಿಡಿಯೋ ವೈರಲ್, ₹53,500 ದಂಡ!

Spread the love

ಉತ್ತರ ಪ್ರದೇಶ: ಕೆಲಪ್ರೇಮಿಗಳು ಬಸ್ ನಿಲ್ದಾಣಗಳಲ್ಲಿ, ಮಾಲ್‌ಗಳಲ್ಲಿ ಹಾಗೂ ಬೈಕ್ ಓಡಿಸುವಾಗ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ಬೈಕ್‌ನಲ್ಲಿ ಜೋಡಿ ಹಕ್ಕಿ ತಬ್ಬಿಕೊಂಡು ರೊಮ್ಯಾನ್ಸ್ ಮಾಡುತ್ತಿದ್ದಾರೆ. ಉತ್ತರಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಚಿನ್ ಗುಪ್ತಾ ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾದ ವಿಡಿಯೋವು ನೋಯ್ದ ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್‌ನಲ್ಲಿ ಸವಾರಿ ಮಾಡುತ್ತಿರುವ ಜೋಡಿಹಕ್ಕಿಗಳ ವಿಡಿಯೋ ಇದಾಗಿದೆ. ಈ ವಿಡಿಯೋದಲ್ಲಿ ಯುವಕನು ಬೈಕ್ ಓಡಿಸುತ್ತಿದ್ದರೆ, ಯುವತಿಯೊಬ್ಬಳು ಪೆಟ್ರೋಲ್ ಟ್ಯಾಂಕ್ ಮೇಲೆ ಹಿಮ್ಮುಖವಾಗಿ ಕುಳಿತುಕೊಂಡಿದ್ದು ಯುವಕನನ್ನು ತಬ್ಬಿಕೊಂಡಿದ್ದಾಳೆ. ಇಬ್ಬರೂ ಕೂಡ ಹೆಲ್ಮೆಟ್ ಧರಿಸಿಲ್ಲ. ಯುವತಿಯು ಯುವಕನನ್ನು ತಬ್ಬಿಕೊಂಡು ಚುಂಬಿಸಿರುವುದನ್ನು ಕಾಣಬಹುದು.

ಈ ದೃಶ್ಯವು ಸಾರ್ವಜನಿಕರಿಗೆ ಮುಜುಗರ ತರುವಂತೆ ಆಗಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಈ ಜೋಡಿಗೆ ಸರಿಯಾಗಿಯೇ ಬಿಸಿ ಮುಟ್ಟಿಸಿದ್ದಾರೆ. ನೋಯ್ಡಾ ಸಂಚಾರಿ ಪೊಲೀಸರು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬೈಕ್ ಸವಾರನಿಗೆ 53,500 ರೂಪಾಯಿ ದಂಡ ವಿಧಿಸಿದ್ದಾರೆ

ಜೂನ್ 16 ರಂದು ಶೇರ್ ಮಾಡಲಾದ ವಿಡಿಯೋವು ಈಗಾಗಲೇ ಅರವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಬಳಕೆದಾರರೊಬ್ಬರು, ಇವರಿಗೆ ದಂಡ ವಿಧಿಸಿದರೆ ಸಾಕಾಗುವುದಿಲ್ಲ. ತಮ್ಮ ಜೀವದ ಜೊತೆಗೆ ಆಟವಾಡುವುದು ಮಾತ್ರವಲ್ಲ, ಇತರ ಪ್ರಯಾಣಿಕರ ಜೀವಕ್ಕೂ ಅಪಾಯವನ್ನುಂಟು ಮಾಡುತ್ತಾರೆ ಎಂದಿದ್ದಾರೆ. ಮತ್ತೊಬ್ಬರು, ಮಾನ ಮರ್ಯಾದೆ ಇಲ್ಲದವರು ಮಾತ್ರ ಈ ರೀತಿ ವರ್ತಿಸಲು ಸಾಧ್ಯ ಎಂದಿದ್ದಾರೆ. ಇನ್ನೊಬ್ಬರು, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಅಸಭ್ಯವಾಗಿ ವರ್ತಿಸುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *