ಸಿದ್ದರಾಮಯ್ಯ 16ನೇ ಬಜೆಟ್ ಮಂಡನೆ: ಬಿಸಿಯೂಟ ಕಾರ್ಯಕರ್ತೆಯರು ಮತ್ತು ಅತಿಥಿ ಶಿಕ್ಷಕರಿಗೆ ಗೌರವಧನ ಹೆಚ್ಚಳ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. *ಇದೀಗ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟ್ನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಅನ್ನು “ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ಕರ್ನಾಟಕ ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದಿದ್ದಾರೆ.
ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.