Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿರಸಿಯಲ್ಲಿ ಶ್ರೀಗಂಧ ಕಳ್ಳತನ – ಮೂವರು ಬಂಧನ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.
ಶಿಂಗನಳ್ಳಿಯ ಸುಬ್ರಾಯ ನಾರಾಯಣ ನಾಯ್ಕ(66), ರಾಮ ಅಣ್ಣಪ್ಪ ನಾಯ್ಕ(60), ಬಿಗಿರಿಕೊಪ್ಪದ ಅಬ್ದುಲ್ ರಹೀಮ್ ಅಬ್ದುಲ್ ಗಫರ್ ಸಾಬ್(63) ಬಂಧಿತ ಆರೋಪಿಗಳು.ಬಂಧಿತರಿAದ ಒಟ್ಟು 41.890ಕೆ.ಜಿಯ 11 ಶ್ರೀಗಂಧದ ಹಸಿತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಕೃತ್ಯಕ್ಕೆ ಬಳಸಿದ ಕತ್ತಿ, ಕೈಗರಗಸ, ನೀರಿನ ಬಾಟಲಿ, ಮೊಬೈಲ್ ಫೋನ್‌ಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ.ಜಿ.ಆರ್.ಜಾನ್ಮನೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರೀಶ್.ಸಿ.ಎನ್. ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶಿವಾನಂದ ನಿಂಗಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.ಕರ್ನಾಟಕ ಅರಣ್ಯ ಕಾಯ್ದೆ 1963ರ 00 24(3), 84, 85, 87 ಆರ್/ಡಬ್ಲ್ಯೂ 86 ಮತ್ತು 1969 ಡಿ ನಿಯಮ 144, 145ರಂತೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *