ಸೌದಿ ಅರೇಬಿಯಾ: ದೇಶದ ವಾಯುಪ್ರದೇಶಕ್ಕೆ ನುಗ್ಗಿದ 9 ಡ್ರೋನ್ಗಳನ್ನು ಹೊಡೆದುರುಳಿಸಿದ ಸೇನೆ

ರಿಯಾದ್: ಸೌದಿ ಅರೇಬಿಯಾದ ವಾಯುಪ್ರದೇಶವನ್ನು ಪ್ರವೇಶಿಸಲು ಯತ್ನಿಸಿದ 9 ಡೋನ್ ಗಳನ್ನು ದೇಶದ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ ಎಂದು ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.
ದೇಶದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ವಾಯು ರಕ್ಷಣಾ ವ್ಯವಸ್ಥೆಗಳು ತಕ್ಷಣ ಕಾರ್ಯಾಚರಣೆ ನಡೆಸಿ ಡೋನ್ಗಳನ್ನು ತಡೆದು ನಾಶಪಡಿಸಲಾಗಿದೆ ಎಂದು ಸಚಿವಾಲಯ ಹೇಳಿದೆ ಎಂದು Aljazeera ವರದಿ ಮಾಡಿದೆ.
ಈ ಡೋನ್ಗಳು ಯಾವ ಪ್ರದೇಶದಿಂದ ಹಾರಿಸಲ್ಪಟ್ಟವು ಮತ್ತು ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದರ ಬಗ್ಗೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿಲ್ಲ.
