Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಎಲ್ಲಾದರೂ ಹೋಗಿ ಸಾಯಿ” ಎಂಬ ಮಾತು ಆತ್ಮಹತ್ಯೆಗೆ ಪ್ರಚೋದನೆ ಅಲ್ಲ: ಹೈಕೋರ್ಟ್‌

Spread the love

ಬೆಂಗಳೂರು : ಸಾಮಾನ್ಯವಾಗಿ ಕೌಟುಂಬಿಕ ಕಲಹದಲ್ಲಿ ಯಾರಾದರೂ ಬೇಸತ್ತು ಎಲ್ಲಾದರೂ ಹೋಗಿ ಸಾಯಿ ಎಂದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತೆ ಆಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಹೌದು ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಿಂದ ಮೃತಳ ಇಬ್ಬರು ಸಹೋದರರು ಮತ್ತು ಅತ್ತಿಗೆಯನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ಜಿ.ಬಸವರಾಜು ಅವರ ಪೀಠ ಈ ಅಭಿಪ್ರಾಯ ವ್ಯಕ್ತಡಿಸಿದೆ.

ಪ್ರಕರಣವೇನು?

ಹಾವೇರಿಯ ಹಿರೇಕೆರೂರು ತಾಲೂಕಲ್ಲಿ ಮೃತ ಸುಧಾ, ಆಕೆಯ ಪತಿ ನಾಗರಾಜು ಹಾಗೂ ಪ್ರಕರಣದ ಆರೋಪಿಗಳು ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. 2014ರ ಜ.8ರಂದು ಬೆಳಗ್ಗೆ 8 ಗಂಟೆಗೆ ಮನೆ ಮುಂದೆ ಕಸ ಹೊಡೆಯುತ್ತಿದ್ದ ಸುಧಾ ಅವರನ್ನು ಉದ್ದೇಶಿಸಿ ಮನೆ ಖಾಲಿ ಮಾಡುವಂತೆ ಆರೋಪಿಗಳು ಹೇಳಿದ್ದರು. ಇದರಿಂದ ಕೆರಳಿದ್ದ ಸುಧಾ, ಈ ಮನೆ ತನ್ನ ಗಂಡನ ತಾತನಿಗೆ ಸೇರಿದೆ. ಮನೆ ಖಾಲಿ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದರು. ಆಗ ಆರೋಪಿಗಳು ಎಲ್ಲಿಗಾದರೂ ಹೋಗಿ ಸಾಯಿ ಎಂದು ಹೇಳಿದ್ದು, ನಂತರ ಅವರ ಮಧ್ಯೆ ಜಗಳ ನಡೆದಿದೆ.

ಘಟನೆಯಿಂದ ಬೇಸತ್ತ ಸುಧಾ ಮನೆಯೊಳಗೆ ಹೋಗಿ ಸೀಮೆ ಎಣ್ಣೆ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಇದರಿಂದ ಶೇ.95ರಷ್ಟು ಸುಟ್ಟು ಹೋಗಿದ್ದ ಸುಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದ ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಡಿ ಆರೋಪ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಧಾರಗಳ ಕೊರತೆಯಿಂದ ಸೆಷನ್ಸ್‌ ಕೋರ್ಟ್‌ ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

ಆ ಆದೇಶ ಪ್ರಶ್ನಿಸಿ ಪೊಲೀಸರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಚೋದನೆ ಎಂಬ ಪದ ಕೆಲ ಕಠಿಣ ಅಥವಾ ಅನುಚಿತ ಕ್ರಿಯೆಗೆ ಉತ್ತೇಜಿಸುವುದು ಅಥವಾ ಒತ್ತಾಯಿಸುವುದು, ಕುಮ್ಮಕ್ಕು ನೀಡುವುದನ್ನು ಸೂಚಿಸುತ್ತದೆ. ಎಲ್ಲಾದರೂ ಹೋಗಿ ಸಾಯಿ ಎಂದು ಮೃತ ಮಹಿಳೆಗೆ ಆರೋಪಿಗಳು ಹೇಳಿರುವುದನ್ನು ಒಪ್ಪಿದರೂ, ಅದು ಸಾವಿಗೆ ಪ್ರಚೋದನೆ ನೀಡಿದಂತಾಗುವುದಿಲ್ಲ. ಈ ಹೇಳಿಕೆಯಿಂದ ಮೃತಳನ್ನು ಸಾವಿಗೆ ತಳ್ಳಬೇಕು ಎಂಬ ಅಪರಾಧಿಕ ಮನಸ್ಸನ್ನು ಆರೋಪಿಗಳು ಹೊಂದಿದ್ದರು ಎನ್ನಲಾಗದು. ಜಗಳದ ವೇಳೆ ಕ್ಷಣಾರ್ಧದಲ್ಲಿ, ಸಿಟ್ಟಿನ ಭಾವನೆಯಲ್ಲಿ ಹೇಳಿರುವ ಪದಗಳು ಇವು ಎಂಬುದು ಸಾಮಾನ್ಯ ಜ್ಞಾನ ಎಂದು ನ್ಯಾಯಪೀಠ ಹೇಳಿದೆ.


Spread the love
Share:

administrator

Leave a Reply

Your email address will not be published. Required fields are marked *