Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಏಪ್ರಿಲ್ 10 ನಂತರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಮೌಲ್ಯಮಾಪನ ಕೊನೆಯ ಹಂತದಲ್ಲಿ

Spread the love

ಬೆಂಗಳೂರು: ಮಾರ್ಚ್‌ ತಿಂಗಳಿನಲ್ಲಿ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ಸುಗಮವಾಗಿ ನಡೆದಿತ್ತು. 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆದಿದ್ದರು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸಲು ತಯಾರಿ ನಡೆಯುತ್ತಿದೆ.

ಏಪ್ರಿಲ್ 10ರ ಬಳಿಕ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ಸಿಕ್ಕಿದೆ.

ಮಾರ್ಚ್‌ 1 ರಿಂದ 20ರ ತನಕ ರಾಜ್ಯದ 1,771 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ಬರೆದಿದ್ದರು. ಫಲಿತಾಂಶದ ಸುಧಾರಣೆ, ವಿದ್ಯಾರ್ಥಿಗಳಿಗೆ ಸಹಾಯಕವಾಗಲು ಒಟ್ಟು ಮೂರು ಪರೀಕ್ಷೆಗಳನ್ನು ಮಾಡಲಾಗುತ್ತದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಬೇಕಿದೆ. ಪರೀಕ್ಷೆ ಮುಗಿದ ಬಳಿಕ ರಾಜ್ಯದ 76 ಕೇಂದ್ರಗಳಲ್ಲಿ 25 ಸಾವಿರಕ್ಕೂ ಅಧಿಕ ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ಪ್ರಾರಂಭಿಸಿದ್ದರು.
ಕಂಪ್ಯೂಟರ್‌ಗೆ ದಾಖಲು: ಇನ್ನು ಎರಡು ದಿನದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಕಂಪ್ಯೂಟರ್‌ಗೆ ಫಲಿತಾಂಶವನ್ನು ದಾಖಲು ಮಾಡುವ ಪ್ರಕ್ರಿಯೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಏಪ್ರಿಲ್ 2ನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಗುರಿಯನ್ನು ಹೊಂದಿದೆ.
ಯಾವುದೇ ಗೊಂದಲಗಳು ಆಗದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಸಿತ್ತು. ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜನೆಗೊಂಡಿದ್ದ ಅಧಿಕಾರಿ/ ಸಿಬ್ಬಂದಿಗಳಿಗೆ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಣೆ ಮಾಡಲು ಸೂಚನೆ ನೀಡಲಾಗಿತ್ತು.

ಖಾಸಗಿಯಾಗಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ, ಪರೀಕ್ಷಾ ಫಲಿತಾಂಶ ತಿರಸ್ಕಾರ ಮಾಡಿದ (ಅಂಕಗಳು ತೃಪ್ತಿ ಇರದ ಹಿನ್ನೆಲೆ) ಹೊಸ ವಿದ್ಯಾರ್ಥಿಗಳು ಮತ್ತು ಪುನಾರವರ್ತಿತ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಮೂರು ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮ ನಡೆಯದಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್, ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿತ್ತು.

ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿತ್ತು. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿತ್ತು. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಲಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *