Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಿರಿಯ ಉದ್ಯಮಿಗೆ ₹ 8.3 ಕೋಟಿ ಸೈಬರ್ ವಂಚನೆ

Spread the love

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧರೊಬ್ಬರು ಸೈಬರ್ ವಾಂಚನಿಗೆ ಒಳಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದರು. ಇದೀಗ ಅಂತದ್ದೇ ಘಟನೆ ಮತ್ತೊಂದು ವರದಿಯಾಗಿದ್ದು, ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ. ಹೂಡಿಕೆಯಿಂದ ಬಂದ ಲಾಭದ ಹಣವನ್ನು ದಾನ ಮಾಡಲು ಉದ್ದೇಶಿಸಿದ್ದ ರಾಜೇಂದ್ರ ನಾಯ್ಡು ಇದ್ದ ಹಣವನ್ನೂ ಕಳೆದು ಕೈಸುಟ್ಟುಕೊಂಡಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ವಚಕರು ಅವರಿಂದ ಹಣ ಪೀಕಿಸಿದ್ದಾರೆ. ವಂಚನೆಗೆ ಒಳಗಾದವರು ರಾಜೇಂದ್ರ ನಾಯ್ಡು (71) ಎಂಬ ಉದ್ಯಮಿಯಾಗಿದ್ದು, ಅಯೋಧ್ಯೆಯ ರಾಮ ಭಕ್ತರಾಗಿದ್ದಾರೆ. ಅವರು ಅಯೋಧ್ಯೆಯ ರಾಮಮಂದಿರಕ್ಕೆ ಬೆಳ್ಳಿ ಪೂಜಾ ಸಾಮಾಗ್ರಿಗಳನ್ನು ದೇಣಿಗೆ ನೀಡಿದ್ದರು. ಈ ಹಿಂದೆ ರಿಲಯನ್ಸ್ ಕ್ಯಾಪಿಟಲ್‌ನಲ್ಲಿ ಸಾಲ ಪಡೆದು ಅದನ್ನು ಸಂಪೂರ್ಣವಾಗಿ ತೀರಿಸಿದ್ದರು.

ರಿಲಯನ್ಸ್ ಕಂಪನಿಯ ಹೆಸರನ್ನು ಬಳಸಿ ನಂಬಿಕೆ ಮೂಡಿಸಿದ ವಂಚಕರು, RARCLLPRO ಎಂಬ ಮೊಬೈಲ್ ಆ್ಯಪ್ ಇನ್​​ಸ್ಟಾಲ್ ಮಾಡುವಂತೆ ಸೂಚಿಸಿದ್ದರು. ಆ್ಯಪ್ ಮೂಲಕ ಹೂಡಿಕೆ ವಿವರಗಳು ತೋರಿಸುತ್ತಿದ್ದುದರಿಂದ ನಂಬಿದ ನಾಯ್ಡು ಮೊದಲಿಗೆ 25 ಲಕ್ಷ ರೂಪಾಯಿ RTGS ಮೂಲಕ ವರ್ಗಾಯಿಸಿದ್ದರು.

ಆ್ಯಪ್‌ನಲ್ಲಿ ಹೂಡಿಕೆ ಯಶಸ್ವಿಯಾಗಿದೆ ಎಂಬುದು ತೋರಿದ ಬಳಿಕ ಹಂತ ಹಂತವಾಗಿ ಒಟ್ಟು 8.3 ಕೋಟಿ ರೂಪಾಯಿಯನ್ನು ಹೂಡಿಕೆ ಮಾಡಿದ್ದಾರೆ. ಆ್ಯಪ್‌ನಲ್ಲಿ ಈ ಮೊತ್ತಕ್ಕೆ 59.4 ಕೋಟಿ ರೂಪಾಯಿ ಲಾಭಾಂಶ ಬಂದಿದೆ ಎಂದು ತೋರಿಸಲಾಗಿತ್ತು. ಇದರಲ್ಲಿ 15 ಕೋಟಿ ರೂಪಾಯಿ ವಿತ್‌ಡ್ರಾ ಮಾಡಲು ಪ್ರಯತ್ನಿಸಿದಾಗ ಸಾಧ್ಯವಾಗಿರಲಿಲ್ಲ. ಇದರಿಂದ ನಾಯ್ಡು ಅವರಿಗೆ ವಂಚನೆಯ ಅನುಮಾನ ಬಂದಿದೆ.

ಹಣ ವಿತ್​ಡ್ರಾ ಮಾಡಲು ಸಾಧ್ಯವಾಗದ ಬಗ್ಗೆ ಪ್ರಶ್ನಿಸಿದಾಗ ವಂಚಕರು, ಅದಕ್ಕೆ ಶೇಕಡಾ 18 ರಷ್ಟು ಸೇವಾ ಶುಲ್ಕವಾಗಿ 2.70 ಕೋಟಿ ರೂಪಾಯಿ ಪಾವತಿಸಬೇಕು ಎಂದು ಬೇಡಿಕೆ ಇಟ್ಟರು. ಇದರಿಂದ ಅನುಮಾನಗೊಂಡ ರಾಜೇಂದ್ರ ನಾಯ್ಡು ತಕ್ಷಣ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದರು.


Spread the love
Share:

administrator

Leave a Reply

Your email address will not be published. Required fields are marked *