ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ : ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಸೆಪ್ಟೆಂಬರ್ 20ರ ಶನಿವಾರ ನಡೆದಿದೆ.

ಕಾರು ಚಾಲಕ ಕಾವಳಮೂಡೂರು ಗ್ರಾಮದ ಮಾದಡ್ಕ ನಿವಾಸಿ ಧನುಷ್ ಹಾಗೂ ಪರಾರ್ದೊಟ್ಟು ನಿವಾಸಿ ದೀಕ್ಷಿತ್ ಗಾಯಗೊಂಡವರು. ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಸರಕಾರಿ ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಬಸ್ ನ ಮುಂಭಾಗದ ಗಾಜು ಢಿಕ್ಕಿಯ ರಭಸಕ್ಕೆ ಸಂಪೂರ್ಣ ಹುಡಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.