Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಪುವಿನಲ್ಲಿ ಭೀಕರ ರಸ್ತೆ ಅಪಘಾತ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

Spread the love

ಉಡುಪಿ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.

ಮೃತರನ್ನು ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೂಶ್ ಭಂಡಾರಿ ಸೋಮವಾರ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಕೂಟರ್ ಗೆ ಡಿಕ್ಕಿ ಹೊಡೆದ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಅಪಘಾತದ ನಂತರ ಬೇರೆ ವಾಹನಗಳು ದೇಹದ ಮೇಲೆ ಹರಿದಿರುವ ಸಾಧ್ಯತೆ ಇದ್ದು ಮೃತದೇಹ ಸಂಪೂರ್ಣ ನಜ್ಜು ಗುಜ್ಜಾದ ಸ್ಥಿತಿಯಲ್ಲಿದೆ .ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *