ಮಾಟ ಮಂತ್ರದ ನಿವಾರಣೆ ಹೆಸರಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್

ಮಂಗಳೂರು: ಮಾಟ, ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುಸ್ಲಿಂ ಧರ್ಮಗುರುವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಎಂದು ಗುರುತಿಸಲಾಗಿದ್ದು, ಈತ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ತಿಳಿದು ಬಂದಿದೆ.
ಅಷ್ಟು ಮಾತ್ರವಲ್ಲದೇ, ಚಿಕಿತ್ಸೆಯ ನೆಪದಲ್ಲಿ ಕೂಳೂರು ಉಸ್ತಾದ್ ಸುಮಾರು 1 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ ಎಂದು ಹೇಳಲಾಗಿದ್ದು, ಹೀಗಾಗಿ ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಮುಸ್ಲಿಂ ಧರ್ಮಗುರು ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.